ADVERTISEMENT

ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕೈ ಬಿಡಲು ರೈತರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2019, 17:30 IST
Last Updated 8 ನವೆಂಬರ್ 2019, 17:30 IST
ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯನ್ನು ಕೈಬಿಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇವೆಯ ನೇತೃತ್ವದಲ್ಲಿ ಖಾನಾಪುರ ತಾಲ್ಲೂಕಿನ ರೈತರು ಶುಕ್ರವಾರ ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯನ್ನು ಕೈಬಿಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇವೆಯ ನೇತೃತ್ವದಲ್ಲಿ ಖಾನಾಪುರ ತಾಲ್ಲೂಕಿನ ರೈತರು ಶುಕ್ರವಾರ ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.   

ಬೆಳಗಾವಿ: ಗೋವಾಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ’4ಎ’ ವಿಸ್ತರಣೆ ಕಾಮಗಾರಿಯನ್ನು ಕೈಬಿಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇವೆಯ ನೇತೃತ್ವದಲ್ಲಿ ರೈತರು ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ನೀಡಿದರು.

‘ರಾಷ್ಟ್ರೀಯ ಹೆದ್ದಾರಿಯ ನಿಗದಿಪಡಿಸಿದ್ದ ಅಳತೆಗಿಂತ ಹೆಚ್ಚು ಖಾನಾಪುರ ತಾಲ್ಲೂಕಿನ ಇದ್ದಲಹೊಂಡ, ಗಣಿಬೈಲ್, ನಿಟ್ಟೂರ, ಹತ್ತರಗುಂಜಿ, ಜಾಡಅಂಕಲಿ, ಕೇಮೆವಾಡಿ ಗ್ರಾಮಗಳ ರೈತರ ಜಮೀನನ್ನು ತೆಗೆದುಕೊಂಡಿದ್ದಾರೆ. ಅದಲ್ಲದೇ, ಆಯಾ ರೈತರಿಗೆ ಮಾಹಿತಿ ನೀಡದೆ ಕಾಮಗಾರಿ ಆರಂಭಿಸಲಾಗಿದೆ’ ಎಂದು ಅಧ್ಯಕ್ಷ ಚೂನಪ್ಪಾ ಪೂಜೇರಿ ಆರೋಪಿಸಿದರು.

‘ಭೂ ಸ್ವಾಧೀನ ಪ್ರಕ್ರಿಯೆಯನ್ನು ಹಳೆಯ ದರದಲ್ಲಿ ಮಾಡಲಾಗಿದೆ. ಪರಿಷ್ಕೃತ ದರದಲ್ಲಿ ಮಾಡಿ, ರೈತರಿಗೆ ಹೆಚ್ಚಿನ ದರವನ್ನು ನೀಡಬೇಕು. ಇಲ್ಲದಿದ್ದರೆ, ಹೋರಾಟವನ್ನು ಇನ್ನಷ್ಟು ತ್ವರಿತಗೊಳಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ADVERTISEMENT

ರೈತ ಮುಂಡರಾದ ಜಯಶ್ರೀ ಗುರನ್ನವರ, ಅಶೋಕ ಯಮಕನಮರಡಿ, ಸಾತೇರಿ ನಾರಾಯಣಗುರು, ಮಲ್ಲಾರಿ ಬಿರದ, ದೇವಪ್ಪಾ ಗುರವ,ಜ್ಯೋತಿಬಾ ಗುರುವ, ಮಲ್ಲಾರಿ ಸಾವಂತ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.