ADVERTISEMENT

ಕೆಪಿಸಿಸಿ ಹೊಸ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆಯಾಗಿಲ್ಲ: ಸಚಿವ ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 18 ಜುಲೈ 2025, 11:21 IST
Last Updated 18 ಜುಲೈ 2025, 11:21 IST
<div class="paragraphs"><p>ಸತೀಶ ಜಾರಕಿಹೊಳಿ</p></div>

ಸತೀಶ ಜಾರಕಿಹೊಳಿ

   

ಬೆಳಗಾವಿ: ‘ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಸರ್ಕಾರ ಎರಡು ವರ್ಷಗಳ ಅವಧಿಯಲ್ಲಿ ಜಾರಿಗೆ ತಂದ ಕಾರ್ಯಕ್ರಮಗಳು ಹಾಗೂ ಅಭಿವೃದ್ಧಿಗೆ ಪ್ರತಿ ಶಾಸಕರಿಗೆ ನಿಗದಿಪಡಿಸಿದ ನಿಧಿ ಬಗ್ಗೆ ಚರ್ಚಿಸಲಾಗಿದೆಯೇ ಹೊರತು, ಕೆಪಿಸಿಸಿ ಹೊಸ ಅಧ್ಯಕ್ಷರ ಆಯ್ಕೆ ವಿಷಯವಾಗಿ ಚರ್ಚೆಯಾಗಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಪಿಸಿಸಿ ಅಧ್ಯಕ್ಷರನ್ನು ಆಯ್ಕೆ ಮಾಡುವ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ’ ಎಂದರು.

ADVERTISEMENT

‘ಬೆಂಗಳೂರಿನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿಜಯೋತ್ಸವ ಸಂದರ್ಭ ಕಾಲ್ತುಳಿತ ಮತ್ತು ಸಾವು–ನೋವಿಗೆ ಕಾರಣವಾದ ಬಗ್ಗೆ ತನಿಖಾ ವರದಿ ಸಲ್ಲಿಕೆಯಾಗಿದೆ. ಸರ್ಕಾರ ಇದನ್ನು ಅಧ್ಯಯನ ಮಾಡಿ ಕ್ರಮ ಕೈಗೊಳ್ಳುತ್ತದೆ. ಈ ಕಾರ್ಯಕ್ರಮ ಆಯೋಜನೆಗೆ ಆರ್‌ಸಿಬಿ ತಂಡದವರು ಲೋಕೋಪಯೋಗಿ ಸೇರಿದಂತೆ ಯಾವುದೇ ಇಲಾಖೆಯಿಂದ ಯಾವುದೇ ಅನುಮತಿ ಪಡೆದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯ ಭರ್ತಿಯಾಗುವ ಹಂತ ತಲುಪಿದೆ. ಕಳೆದ ವಾರದಿಂದ ಅಣೆಕಟ್ಟೆಯಿಂದ ನದಿಗೆ ನೀರು ಹೊರಬಿಡಲಾಗುತ್ತಿದೆ. ಒಳಹರಿವಿನ ಪ್ರಮಾಣ ಆಧರಿಸಿ, ಸೋಮವಾರವೂ 11 ಸಾವಿರ ಕ್ಯೂಸೆಕ್‌ಗಿಂತ ಹೆಚ್ಚಿನ ನೀರು ಹೊರಬಿಡಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.