ADVERTISEMENT

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಿಗದ ಅನುದಾನ: ಬೈಲಹೊಂಗಲ ಸಂಪೂರ್ಣ ಬಂದ್

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2025, 6:30 IST
Last Updated 18 ಮಾರ್ಚ್ 2025, 6:30 IST
   

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಈ ವರ್ಷದ ಬಜೆಟ್‌ನಲ್ಲಿ ಅನುದಾನ ನೀಡದೇ ರಾಜ್ಯ ಸರ್ಕಾರದ ಮಲತಾಯಿ ಧೋರಣೆ ತೋರಿದೆ ಎಂದು ಆರೋಪಿಸಿ, ಮಂಗಳವಾರ ಬೈಲಹೊಂಗಲ ಸಂಪೂರ್ಣ ಬಂದ್ ಮಾಡಿ, ಪ್ರತಿಭಟನೆ ನಡೆಸಲಾಯಿತು.

ಹೋರಾಟಗಾರರು ಬೈಕ್ ರ್‍ಯಾಲಿ ನಡೆಸಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಪ್ರಮುಖ ವೃತ್ತಗಳಲ್ಲಿ ಧರಣಿ ಕೂಡ ಮಾಡಿದರು.

ಬಂದ್ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಅಂಗಡಿಗಳನ್ನು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿ ಬೆಂಬಲ ಸೂಚಿಸಿದರು. ಜನರಿಂದ ಗಿಜಿಗುಡುತ್ತಿದ್ದ ಬಜಾರ ರಸ್ತೆ ಸ್ಥಬ್ಧವಾಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.