
ಅಥಣಿ: ಕೊಕಟನೂರ ಗ್ರಾಮದ ಯಲ್ಲಮ್ಮದೇವಿ ಜಾತ್ರೆಯಲ್ಲಿ ಯಾವುದೇ ಮೂಢನಂಬಿಕೆ ಆಚರಣೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಶಾಸಕ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ತಿಳಿಸಿದರು.
ಕೊಕಟನೂರ ಗ್ರಾಮದ ಯಲ್ಲಮ್ಮದೇವಿ ಜಾತ್ರೆ ಅಂಗವಾಗಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಭಕ್ತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು, ಆರೋಗ್ಯ, ಸ್ವಚ್ಛತೆ, ಕುಡಿಯುವ ನೀರು, ಸ್ನಾನಕ್ಕೆ ವ್ಯವಸ್ಥೆ, ಬೀದಿ ದೀಪಗಳ ವ್ಯವಸ್ಥೆ, ವಾಹನಗಳ ಸಂಚಾರ ಹಾಗೂ ಪಾರ್ಕಿಂಗ್, ನಿರಂತರ ವಿದ್ಯುತ್ ಹಾಗೂ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಗಳ ಕೈಗೊಳ್ಳಬೇಕು ಎಂದು ಸೂಚಿಸಿದರು.
ದೇವಸ್ಥಾನ ಮುಖ್ಯಸ್ಥ ಶ್ಯಾಮ ಪೂಜಾರಿ, ತಹಶೀಲ್ದಾರ್ ಸಿದ್ರಾಯ ಭೋಸಗಿ, ತಾಲ್ಲೂಕು ಪಂಚಾಯಿತಿ ಎಇಒ ಶಿವಾನಂದ ಕಲ್ಲಾಪೂರ, ಡಿವೈಎಸ್‌ಪಿ ಪ್ರಶಾಂತ ಮುನ್ನೋಳ್ಳಿ, ಪಿಎಸ್‌ಐ ಮಲ್ಲಿಕಾರ್ಜುನ ಸಾಗನೂರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.