ADVERTISEMENT

ಉಪ ಚುನಾವಣೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡುವುದಿಲ್ಲ: ಸಚಿವ ಕೆ.ಎಸ್. ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2020, 7:44 IST
Last Updated 28 ನವೆಂಬರ್ 2020, 7:44 IST
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ   

ಬೆಳಗಾವಿ: 'ಮುಂಬರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾವು ಮುಸ್ಲಿಂ ಸಮುದಾಯದವರಿಗೆ ಟಿಕೆಟ್ ನೀಡುವುದಿಲ್ಲ' ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಬೆಳಗಾವಿ ಹಿಂದುತ್ವದ ಕೇಂದ್ರ. ಇಲ್ಲಿ ನಾವು ಶಂಕರಾಚಾರ್ಯರ, ರಾಣಿ ಚನ್ನಮ್ಮ ಇಲ್ಲವೇ ಸಂಗೊಳ್ಳಿರಾಯಣ್ಣನ ಶಿಷ್ಯರಿಗೆ ಟಿಕೆಟ್ ನೀಡುತ್ತೇವೆ. ಆದರೆ ಮುಸ್ಲಿಮರಿಗೆ ಕೊಡುವುದಿಲ್ಲ' ಎಂದು ಹೇಳಿದರು.

'ಹಿಂದೂಗಳಲ್ಲಿ ಯಾರಿಗೆ ಟಿಕೆಟ್ ಕೊಡಬೇಕು ಎನ್ನುವುದನ್ನು ಪಕ್ಷ ತೀರ್ಮಾನಿಸಲಿದೆ. ಡಿ.4ರಂದು ಇಲ್ಲಿ ಸಮನ್ವಯ ಸಮಿತಿ ಸಭೆ ಹಾಗೂ ಡಿ. 5ರಂದು ರಾಜ್ಯ ಕಾರ್ಯಕಾರಿಣಿ ನಡೆಯಲಿದೆ. ಆ ಸಭೆಗಳಲ್ಲಿ ಅಭ್ಯರ್ಥಿಗಳ ವಿಷಯ ಚರ್ಚೆಗೆ ಬರಬಹುದು' ಎಂದು ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.