ADVERTISEMENT

ಮುಸ್ಲಿಮರಿಗೆ ಟಿಕೆಟ್ ಕೊಡುವುದಿಲ್ಲ: ಸಚಿವ ಕೆ.ಎಸ್. ಈಶ್ವರಪ್ಪ

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2020, 2:31 IST
Last Updated 29 ನವೆಂಬರ್ 2020, 2:31 IST
ಕೆ.ಎಸ್. ಈಶ್ವರಪ್ಪ
ಕೆ.ಎಸ್. ಈಶ್ವರಪ್ಪ   

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಮುಸ್ಲಿಂ ಸಮುದಾಯದವರಿಗೆ ಟಿಕೆಟ್ ನೀಡುವುದಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ಹಿಂದುತ್ವದ ಕೇಂದ್ರ. ಇಲ್ಲಿ ನಾವು ಶಂಕರಾಚಾರ್ಯ, ರಾಣಿ ಚನ್ನಮ್ಮ ಇಲ್ಲವೇ ಸಂಗೊಳ್ಳಿರಾಯಣ್ಣನ ಶಿಷ್ಯರಿಗೆ ಟಿಕೆಟ್ ನೀಡುತ್ತೇವೆಯೇ ಹೊರತು ಮುಸ್ಲಿಮರನ್ನು ಪರಿಗಣಿಸುವುದಿಲ್ಲ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT