
ಬೆಳಗಾವಿಯ ಸುವರ್ಣ ವಿಧಾನಸೌಧ
ಬೆಳಗಾವಿ: ಕಾರ್ಯದರ್ಶಿಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಿ ಸುವರ್ಣ ವಿಧಾನಸೌಧವನ್ನು ಆಡಳಿತ ಶಕ್ತಿಕೇಂದ್ರವಾಗಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ವಿಧಾನಮಂಡಲ ಚಳಿಗಾಲದ ಅಧಿವೇಶನದ ವೇಳೆ ಬೃಹತ್ ಪ್ರತಿಭಟನೆ ನಡೆಸಲಾಗುವುದು’ ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆ ಅಧ್ಯಕ್ಷ ಅಶೋಕ ಪೂಜಾರಿ ಹೇಳಿದರು.
ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಉತ್ತರ ಕರ್ನಾಟಕ ವಿಕಾಸ ವೇದಿಕೆ, ಉತ್ತರ ಕರ್ನಾಟಕ ಹೋರಾಟ ಸಮಿತಿ ಹಾಗೂ ಉತ್ತರ ಕರ್ನಾಟಕ ಪರ ಇರುವ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ನಡೆಯಲಿದೆ. ವಿವಿಧ ಸಂಘಟನೆಗಳೊಂದಿಗೆ ಚರ್ಚಿಸಿ, ಶೀಘ್ರವೇ ಹೋರಾಟದ ದಿನಾಂಕ ನಿಗದಿಪಡಿಸಲಾಗುವುದು’ ಎಂದರು.
‘ನಾವು ಪ್ರತ್ಯೇಕ ರಾಜ್ಯಕ್ಕಾಗಿಯೇ ಹೋರಾಟ ಮಾಡುತ್ತಿಲ್ಲ. ಆದರೆ, ನಿರಂತರವಾಗಿ ಹೋರಾಟ ನಡೆಸಿದರೂ ಉತ್ತರ ಕರ್ನಾಟಕದ ಬೇಡಿಕೆಗಳಿಗೆ ಸರ್ಕಾರದಿಂದ ಸ್ಪಂದನೆ ಸಿಗುತ್ತಿಲ್ಲ. ಹಾಗಾಗಿ ಪ್ರತ್ಯೇಕ ರಾಜ್ಯದ ನಿಲುವು ತಳೆಯುವುದು ಅನಿವಾರ್ಯವಾಗಿದೆ’ ಎಂದು ತಿಳಿಸಿದರು.
ಪ್ರೊ.ಎ.ವೈ.ಪಂಗಣ್ಣವರ, ವಿ.ಜಿ.ನೀರಲಗಿಮಠ, ಉದಯ ಕರಜಗಿಮಠ, ಅಶೋಕ ದೇಶಪಾಂಡೆ, ಜಿ.ಡಿ.ದೇಶಪಾಂಡೆ, ಪ್ರವೀಣ ಪಾಟೀಲ, ಸಿ.ಬಿ.ಸಂಗೊಳ್ಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.