ವಿಜಯೇಂದ್ರ
ಬೆಳಗಾವಿ: ‘ಬಿಜೆಪಿ ನಾಯಕರನ್ನೇ ಗುರಿಯಾಗಿಸಿಕೊಂಡು ಹಳೆಯ ಪ್ರಕರಣಗಳನ್ನು ಹುಡುಕಲಾಗುತ್ತಿದೆ. ಇದಕ್ಕಾಗಿ ವಿಶೇಷ ತನಿಖಾ ತಂಡ ರಚಿಸಲಾಗುತ್ತಿದೆ. ಇಂಥ ಬೆದರಿಕೆಗಳಿಗೆ ನಾವು ಮಣಿಯಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕೋವಿಡ್ ಸಂದರ್ಭದಲ್ಲಿ ಅಕ್ರಮ ನಡೆದಿದೆ ಎಂದು ಪುಕಾರು ಎಬ್ಬಿಸಲಾಗುತ್ತಿದೆ. ಮುಖ್ಯಮಂತ್ರಿ ಅವರಿಗೆ ಯಾವಾಗ, ಏನು ಮಾಡಬೇಕು ಎಂಬುದು ತೋಚುತ್ತಿಲ್ಲ. ಪ್ರತಿಪಕ್ಷವನ್ನು ಬೆದರಿಸಿದರೆ ತಮ್ಮ ಕುರ್ಚಿ ಗಟ್ಟಿಯಾಗುತ್ತದೆ ಎಂದುಕೊಂಡಿದ್ದಾರೆ. ಇದು ನಾಲಾಯಕ್ ಸರ್ಕಾರ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.