ADVERTISEMENT

ಕಬ್ಬು ತೂಕದಲ್ಲಿ ವ್ಯತ್ಯಾಸ ಕಂಡುಬಂದಿಲ್ಲ: ಕಲಕೇರಿ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2022, 12:37 IST
Last Updated 14 ಡಿಸೆಂಬರ್ 2022, 12:37 IST
   

ಬೆಳಗಾವಿ: ಜಿಲ್ಲೆಯ ಎಂಟು ಸಕ್ಕರೆ ಕಾರ್ಖಾನೆಗಳ ಮೇಲೆ ಬುಧವಾರ ದಾಳಿ ನಡೆಸಲಾಗಿದ್ದು, ಯಾವುದೇ ಕಾರ್ಖಾನೆಯಲ್ಲಿ ತೂಕದಲ್ಲಿ ವ್ಯತ್ಯಾಸ ಕಂಡುಬಂದಿಲ್ಲ ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯದ ಆಯುಕ್ತ ಶಿವಾನಂದ ಕಲಕೇರಿ ತಿಳಿಸಿದ್ದಾರೆ.

‘ತೂಕದಲ್ಲಿ ಮೋಸ ಮಾಡಲಾಗುತ್ತಿದೆ ಎಂದು ರೈತರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬುಧವಾರ ದಾಳಿ ಮಾಡಲಾಗಿದೆ.ಬೀದರ್‌ನಿಂದ ಕಾರವಾರವರೆಗೆ ಒಟ್ಟು 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆದಿದೆ. ಇದರಲ್ಲಿ ಬೆಳಗಾವಿ ಜಿಲ್ಲೆಯ ಎಂಟು ಕಾರ್ಖಾನೆಗಳಲ್ಲಿ ಯಾವುದೇ ತರಹದ ವ್ಯತ್ಯಾಸ ಕಂಡುಬಂದಿಲ್ಲ’ ಎಂದರು.

ಚಿಕ್ಕೋಡಿ ತಾಲ್ಲೂಕಿನ ಜೈನಾಪುರದ ಅರಿಹಂತ ಶುಗರ್ಸ್‌ ಇಂಡಸ್ಟ್ರೀಸ್‌, ಬೇಡಕಿಹಾಳದ ವೆಂಕಟೇಶ್ವರ ಪವರ್‌ ಪ್ರಾಜೆಕ್ಟ್‌, ಅಥಣಿಯ ಅಥಣಿ ಶುಗರ್ಸ್‌, ಬೆಳಗಾವಿ ತಾಲ್ಲೂಕಿನ ಹುದಲಿಯ ಬೆಳಗಾಂ ಶುಗರ್ಸ್‌ ಪ್ರೈವೇಟ್‌ ಲಿಮಿಟೆಡ್‌, ಖಾನಾಪುರ ತಾಲ್ಲೂಕಿನ ಕುಪ್ಪಟಗಿರಿಯ ಲೈಲಾ ಶುಗರ್ಸ್‌, ಕಾಗವಾಡ ತಾಲ್ಲೂಕಿನ ಶಿರಗುಪ್ಪಿಯಲ್ಲಿರುವ ಶಿರಗುಪ್ಪಿ ಶುಗರ್ಸ್‌ ವರ್ಕ್ಸ್‌ ಲಿಮಿಟೆಡ್‌, ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ವಿಶ್ವರಾಜ್‌ ಶುಗರ್ಸ್‌ ಕಾರ್ಖಾನೆಗಳ ಮೇಲೆ ದಾಳಿ ನಡೆದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.