ADVERTISEMENT

ಕೆಲಸ ಕಾಯಂಗೊಳಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 12:46 IST
Last Updated 28 ಜುಲೈ 2020, 12:46 IST
ಕೆಲಸ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಸಂಘದವರು ಬೆಳಗಾವಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು
ಕೆಲಸ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಸಂಘದವರು ಬೆಳಗಾವಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ಕೆಲಸ ಕಾಯಂಗೊಳಿಸುವಂತೆ ಆಗ್ರಹಿಸಿ ಇಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಸಂಘದವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

‘ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಕಂಟೈನ್ಮೆಂಟ್‌ ಝೋನ್‌ ಸೇರಿದಂತೆ ವಿವಿಧೆಡೆ ಕೋವಿಡ್–19 ಸಂದರ್ಭದಲ್ಲೂ ರಜೆ ಪಡೆಯದೆ ಪ್ರಾಣದ ಹಂಗು ತೊರೆದು ಕಾರ್ಯನಿರ್ವಹಿಸಿದ್ದೇವೆ. ಆದರೂ ಸಮಾನ ಕೆಲಸಕ್ಕೆ ಸಮಾನ ವೇತನ ಸಿಗುತ್ತಿಲ್ಲ. ಸೇವಾ ಭದ್ರತೆ ಹಾಗೂ ಸೌಲಭ್ಯಗಳು ದೊರೆಯುತ್ತಿಲ್ಲ. ಇದರಿಂದಾಗಿ ಅತಂತ್ರವಾಗಿದ್ದೇವೆ’ ಎಂದು ತಿಳಿಸಿದರು.

‘ಕಾಯಂ ಸಿಬ್ಬಂದಿಗೆ ನೀಡುವ ವೇತನವನ್ನು ನಮಗೂ ಕೊಡಬೇಕು. ನೇರ ನೇಮಕಾತಿ ಮಾಡಿಕೊಳ್ಳುವಾಗ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಕೃಪಾಂಕ ಕೊಟ್ಟು ಆದ್ಯತೆ ನೀಡಬೇಕು. ಕೋವಿಡ್ ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿರುವುದರಿಂದ ವೇತನದ ಜೊತೆಗೆ ವಿಶೇಷ ಭತ್ಯೆ ಕೊಡಬೇಕು. ಸಮವಸ್ತ್ರ ಭತ್ಯೆ, ವಸತಿ ಗೃಹ ಸೌಲಭ್ಯ ಕಲ್ಪಿಸಬೇಕು. ಜಿಲ್ಲಾವಾರು ವರ್ಗಾವಣೆಗೆ ಅವಕಾಶ ಕೊಡಬೇಕು. ಪಿಪಿಇ ಕಿಟ್‌ಗಳನ್ನು ಒದಗಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಈ ಎಲ್ಲ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳವಾರದಿಂದ ಒಂದು ವಾರದವರೆಗೆ ಕೆಲಸ ಸ್ಥಗಿತಗೊಳಿಸಲಿದ್ದೇವೆ. ಸ್ಪಂದನೆ ದೊರೆಯದಿದ್ದಲ್ಲಿ ಹೋರಾಟ ಮುಂದುವರಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.