ಹುಕ್ಕೇರಿ: ಜನರು ಹೊರಗಿನ ಆಹಾರ ಪದಾರ್ಥಗಳನ್ನು ಹೆಚ್ಚು ಸೇವಿಸುತ್ತಿದ್ದು, ಪೌಷ್ಟಿಕತೆ ಇಲ್ಲದ ಆಹಾರ ಸೇವಿಸುತ್ತಿರುವುದರಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಇದೇ ಪ್ರವೃತ್ತಿ ಮುಂದುವರಿದಲ್ಲಿ ಸದೃಢವಿಲ್ಲದ ಜನರು ಹೇಗೆ ಸದೃಢ ದೇಶ ನಿರ್ಮಿಸಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಜಣ್ಣ ಸಂಕಣ್ಣವರ ಹೇಳಿದರು.
ಪಟ್ಟಣದ ಅಡವಿ ಸಿದ್ಧೇಶ್ವರ ಮಠದ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಿಡಿಪಿಒ ಮತ್ತು ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸೋಮವಾರ ನಡೆದ ‘ವಿಶ್ವ ಪೌಷ್ಟಿಕ ಆಹಾರ ದಿನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಿರಿಯ ದಿವಾಣಿ ನ್ಯಾಯಾಧೀಶ ಆದಿತ್ಯ ಕಲಾಲ್ ಮಾತನಾಡಿ, ಪೂರ್ವಜರು ಹವಾಮಾನಕ್ಕೆ ತಕ್ಕಂತೆ ಆಹಾರ ಸೇವಿಸುತ್ತಿದ್ದರು ಮತ್ತು ಗಟ್ಟಿಮುಟ್ಟಾಗಿ ಜೀವನ ಸಾಗಿಸುತ್ತಿದ್ದರು. ಹಿರಿಯರು ಮತ್ತು ಪಾಲಕರು ಆಹಾರ ಪದ್ಧತಿ ಕುರಿತು ಮಕ್ಕಳಿಗೆ ಮಾಹಿತಿ ನೀಡಬೇಕು ಎಂದರು.
ವಕೀಲರ ಸಂಘದ ಅಧ್ಯಕ್ಷ ಕಾಡಪ್ಪ ಕುರಬೇಟ, ಸಿಡಿಪಿಒ ಎಚ್.ಹೊಳೆಪ್ಪ, ಜಾನಪದ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಸುಭಾಸ ನಾಯಿಕ ಪೌಷ್ಟಿಕ ಆಹಾರದ ಮಹತ್ವ ತಿಳಿಸಿದರು.
ಹಿರಿಯ ವಕೀಲ ಭೀಮಸೇನ್ ಬಾಗಿ, ಎಸಿಡಿಪಿಒ ಕಮಲಾ ಹಿರೇಮಠ ಅವರು ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ ಸಿಡಿಪಿಒ ಇಲಾಖೆ ವತಿಯಿಂದ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯ ನೆರವೇರಿಸಲಾಯಿತು.
ವಿವಿಧ ತರಕಾರಿ, ಸಿಹಿ ಪದಾರ್ಥ, ಹೋಳಿಗೆ, ಪಾಯಸ ಮತ್ತಿತರ ಪದಾರ್ಥಗಳನ್ನು ಪ್ರದರ್ಶಿಸಲಾಯಿತು.
ಗ್ರೇಡ್ 2 ತಹಶೀಲ್ದಾರ್ ಪ್ರಕಾಶ ಕಲ್ಲೋಳಿ, ಪಿಐ ಮಹಾಂತೇಶ ಬಸ್ಸಾಪುರೆ, ವಕೀಲರ ಸಂಘದ ಉಪಾಧ್ಯಕ್ಷ ಬಸು ಜಿನರಾಳಿ, ಕಾರ್ಯದರ್ಶಿ ಎಸ್.ಜಿ.ನದಾಫ್, ಮಹಿಳಾ ಪ್ರತಿನಿಧಿ ಅನಿತಾ ಕುಲಕರ್ಣಿ, ವಕೀಲರಾದ ಏಗಣ್ಣವರ, ದಡ್ಡಿಮನಿ, ಇಸಿಒ ಎಂ.ಡಿ.ಬಡಿಗೇರ್, ಎಸಿಡಿಪಿಒ ಮಲ್ಲಿಕಾರ್ಜುನ ಕೋಳಿ, ಶೈಲಾ ಕುರಾಣಿ, ವಕೀಲೆ ಆಶಾ ಸಿಂಗಾಡಿ, ಮಹಾದೇವಿ ಜಕಮತಿ ಸೇರಿದಂತೆ ಅನೇಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.