NWKRTC ಬಸ್ ಮರಕ್ಕೆ ಡಿಕ್ಕಿ: ಇಬ್ಬರು ಪ್ರಯಾಣಿಕರಿಗೆ ಗಾಯ
ಬೆಳಗಾವಿ: ತಾಲ್ಲೂಕಿನ ಬೆನಕನಹಳ್ಳಿಯಿಂದ ಬೆಳಗುಂದಿಗೆ ಸಾಗುವ ಮಾರ್ಗದಲ್ಲಿ ಸಂಚರಿಸುತ್ತಿದ್ದ NWKRTC ಸಾರಿಗೆ ಸಂಸ್ಥೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಶುಕ್ರವಾರ ಮರಕ್ಕೆ ಡಿಕ್ಕಿ ಹೊಡೆದಿದ್ದು, ಇಬ್ಬರು ಪ್ರಯಾಣಿಕರಿಗೆ ಸಣ್ಣ–ಪುಟ್ಟ ಗಾಯಗಳಾಗಿವೆ.
‘ಸಾರಿಗೆ ಸಂಸ್ಥೆಯ ಬೆಳಗಾವಿ ನಗರ 3ನೇ ಘಟಕದ ಬಸ್‌ನಲ್ಲಿ 15 ಪ್ರಯಾಣಿಕರು ಸಂಚರಿಸುತ್ತಿದ್ದರು. ಈ ಪೈಕಿ ಅಪಘಾತದಲ್ಲಿ ಗಾಯಗೊಂಡ ಇಬ್ಬರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದೇವೆ’ ಎಂದು ಕಾಕತಿ ಠಾಣೆ ಪೊಲೀಸರು ತಿಳಿಸಿದ್ದಾರೆ.
‘ಸತತ ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಸಾಧ್ಯತೆ ಇದೆ’ ಎಂದು ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ ಹುದ್ದಾರ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.