ADVERTISEMENT

ತ್ಯಾಜ್ಯ ವಿಲೇವಾರಿ ಘಟಕ: ಬೆನಕನಹಳ್ಳಿ ಗ್ರಾಮಸ್ಥರ ವಿರೋಧ

​ಪ್ರಜಾವಾಣಿ ವಾರ್ತೆ
Published 12 ಜುಲೈ 2021, 12:35 IST
Last Updated 12 ಜುಲೈ 2021, 12:35 IST
ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಬೆಳಗಾವಿ ತಾಲ್ಲೂಕಿನ ಬೆನಕನಹಳ್ಳಿ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಸೋಮವಾರ ಮನವಿ ಸಲ್ಲಿಸಿದರು
ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಬೆಳಗಾವಿ ತಾಲ್ಲೂಕಿನ ಬೆನಕನಹಳ್ಳಿ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಸೋಮವಾರ ಮನವಿ ಸಲ್ಲಿಸಿದರು   

ಬೆಳಗಾವಿ: ತಮ್ಮೂರಿನ ಸಮೀಪದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ತಾಲ್ಲೂಕಿನ ಬೆನಕನಹಳ್ಳಿ ಗ್ರಾಮಸ್ಥರು ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಗ್ರಾಮದ ಕೆಎಫ್‍ಸಿಐ ಗೋದಾಮು ಸಮೀಪದಲ್ಲಿ ಘಟಕ ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಇದರಿಂದ ಸುತ್ತಮುತ್ತಲಿನ ನಿವಾಸಿಗಳಿಗೆ ತೊಂದರೆ ಆಗುತ್ತದೆ. ಹೀಗಾಗಿ, ಅಲ್ಲಿ ಸ್ಥಾಪಿಸಬಾರದು. ಆದೇಶ ರದ್ದುಪಡಿಸಬೇಕು’ ಎಂದು ಒತ್ತಾಯಿಸಿದರು.

ಸಿಐಟಿಯು ಸಂಘಟನೆಯ ಮುಖಂಡ ಮಹೇಶ ಕೋಲ್ಕಾರ, ‘ಬೆನಕನಹಳ್ಳಿ, ಸುಳಗಾ ಹಾಗೂ ಆಶ್ರಯ ವಸತಿಯ 200 ಕುಟುಂಬಗಳು ಅಲ್ಲಿ ವಾಸಿಸುತ್ತಿವೆ. ಅಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಿದರೆ ಜನರ ನೆಮ್ಮದಿ ಹಾಳಾಗಲಿದೆ. ಆದ್ದರಿಂದ ಊರಿಂದ ದೂರದ ಪ್ರದೇಶ ಆಯ್ಕೆ ಮಾಡಿಕೊಳ್ಳಬೇಕು’ ಎಂದು ಕೋರಿದರು.

ADVERTISEMENT

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.