ADVERTISEMENT

ಬೆಳಗಾವಿ: ಒಂದು ತಾಸು ಜೋರು ಮಳೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2020, 14:30 IST
Last Updated 14 ಅಕ್ಟೋಬರ್ 2020, 14:30 IST

ಬೆಳಗಾವಿ: ನಗರದಲ್ಲಿ ಬುಧವಾರ ಒಂದು ತಾಸು ಜೋರು ಮಳೆ ಬಿದ್ದಿತು. ನಂತರ ಆಗಾಗ ತುಂತುರು ಮಳೆಯಾಯಿತು.

ಸವದತ್ತಿ, ಹಿರೇಬಾಗೇವಾಡಿ, ಕಿತ್ತೂರು, ಅಥಣಿ, ಚಿಕ್ಕೋಡಿ, ಎಂ.ಕೆ. ಹುಬ್ಬಳ್ಳಿ, ಹುಕ್ಕೇರಿ ಹಾಗೂ ಬೈಲಹೊಂಗಲ ಭಾಗದಲ್ಲಿ ಸಾಧಾರಣ ಮಳೆ ಸುರಿಯಿತು.

ನಾಲ್ಕೈದು ದಿನಗಳಿಂದ ಆಗಾಗ ಮಳೆ ಬೀಳುತ್ತಿರುವುದರಿಂದ ಜಿಲ್ಲೆಯ ವಿವಿಧೆಡೆ 8,500 ಹೆಕ್ಟೇರ್ ಸೋಯಾಬೀನ್, ಹತ್ತಿ, ಮೆಕ್ಕೆಜೋಳ, ಕಬ್ಬು ಬೆಳೆಗಳಿಗೆ ಹಾಗೂ 300ಕ್ಕೂ ಹೆಚ್ಚಿನ ಮನೆಗಳಿಗೆ ಹಾನಿಯಾಗಿದೆ. ಸವದತ್ತಿ ತಾಲ್ಲೂಕಿನ ಇನಾಮಹೊಂಗಲ ಬಳಿಯ ಧಾರವಾಡ ಸಂಪರ್ಕಿಸುವ ಸೇತುವೆ ಜಲಾವೃತವಾಗಿದೆ. ಮೂಡಲಗಿ ತಾಲ್ಲೂಕಿನಲ್ಲಿ ಘಟಪ್ರಭಾ ನದಿಗೆ ನಿರ್ಮಿಸಿರುವ ಢವಳೇಶ್ವರ ಮತ್ತು ಅವರಾದಿಯ ಕೆಳಮಟ್ಟದ ಸೇತುವೆಗಳು ಜಲಾವೃತಗೊಂಡಿದ್ದು, ನಾಲ್ಕು ದಿನಗಳಿಂದ ಸಂಚಾರ ಸ್ಥಗಿತವಾಗಿದೆ.

ADVERTISEMENT

ಆಗಸ್ಟ್‌ ಹಾಗೂ ಸೆಪ್ಟೆಂಬರ್‌ನಲ್ಲಿ ನೆರೆ ಮತ್ತು ಪ್ರವಾಹದಿಂದಾಗಿ 1.20 ಲಕ್ಷ ಹೆಕ್ಟೇರ್‌ ಬೆಳೆಗೆ ಹಾನಿಯಾಗಿತ್ತು. 2,588 ಮನೆಗಳು ಬಿದ್ದಿದ್ದವು. 11 ದನಗಳು ಸಾವಿಗೀಡಾಗಿದ್ದವು.

‘ಹಾನಿ ಸಮೀಕ್ಷೆ ಪ್ರಗತಿಯಲ್ಲಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.