ADVERTISEMENT

ಬೆಳಗಾವಿ ನಗರಕ್ಕೆ ಮತ್ತೊಂದು ಉಪ ನೋಂದಣಿ ಕಚೇರಿ : ಶಾಸಕ ಅಭಯ ಪಾಟೀಲ

​ಪ್ರಜಾವಾಣಿ ವಾರ್ತೆ
Published 22 ಜುಲೈ 2020, 9:32 IST
Last Updated 22 ಜುಲೈ 2020, 9:32 IST

ಬೆಳಗಾವಿ: ‘ನಗರಕ್ಕೆ ಮತ್ತೊಂದು ಉಪ ನೋಂದಣಿ ಕಚೇರಿ ಮಂಜೂರಾಗಿದ್ದು, ಅದನ್ನು ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶೀಘ್ರವೇ ಆರಂಭಿಸಲಾಗುವುದು’ ಎಂದು ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ.

‘ಜಿಲ್ಲೆಯಲ್ಲಿಯೇ ಬೆಳಗಾವಿ ತಾಲ್ಲೂಕು ದೊಡ್ಡದಾಗಿದೆ. ಪ್ರಸ್ತುತ ಜಿಲ್ಲಾಧಿಕಾರಿ ಕಚೇರಿ ಸಮೀಪವಿರುವ ಉಪ ನೋಂದಣಿ ಕಚೇರಿಯಲ್ಲಿ ಆಸ್ತಿ, ಮದುವೆ ನೋಂದಣಿ ಮೊದಲಾದ ವ್ಯವಹಾರಗಳು ಹೆಚ್ಚಾಗಿರುವುದರಿಂದ ಒತ್ತಡ ಉಂಟಾಗುತ್ತಿದೆ. ನಿತ್ಯ ನೂರಾರು ಜನರು ಸರದಿಯಲ್ಲಿ ನಿಂತು ಗಂಟೆಗಟ್ಟಲೆ ಕಾಯಬೇಕಾದ ಸ್ಥಿತಿ ಇದೆ. ಮಳೆಗಾಲದಲ್ಲಿ ನಿಲ್ಲಲು ವ್ಯವಸ್ಥಿತ ಸೂರು ಹಾಗೂ ಇತರ ಮೂಲ ಸೌಲಭ್ಯವಿಲ್ಲದೆ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಗಳನ್ನು ಮನಗಂಡು ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಮನವಿ ಸಲ್ಲಿಸಿದ್ದೆ. ಅದಕ್ಕೆ ಮನ್ನಣೆ ದೊರೆತಿದೆ. ದಕ್ಷಿಣದಲ್ಲಿ ನೂತನ ಉಪ ನೋಂದಣಿ ಕಚೇರಿ ಪ್ರಾರಂಭಿಸಲು ಅನುಮತಿ ಸಿಕ್ಕಿದೆ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT