ADVERTISEMENT

ದೇವಸ್ಥಾನಗಳಿಗೆ ಆಡಳಿತಾಧಿಕಾರಿ ನೇಮಕಕ್ಕೆ ವಿರೋಧ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2021, 10:03 IST
Last Updated 3 ಮಾರ್ಚ್ 2021, 10:03 IST

ಬೆಳಗಾವಿ: ‘ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವ ಕಾರ್ಯವನ್ನು ಕೂಡಲೇ ನಿಲ್ಲಿಸಬೇಕು’ ಎಂದು ಬಿಜೆಪಿ ಮುಖಂಡರ ನಿಯೋಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಆಗ್ರಹಿಸಿತು.

ದಕ್ಷಿಣ ಮತ ಕ್ಷೇತ್ರದ ಶಾಸಕ ಅಭಯ ಪಾಟೀಲ, ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ರವರು, ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ, ಸಂಘ ಪರಿವಾರದ ಪ್ರಮುಖ ವಿನಾಯಕ ಗ್ರಾಮೋಪಾಧ್ಯಾಯ ಹಾಗೂ ಅಶೋಕ ಶಿಂತ್ರೆ ಜಿಲ್ಲಾಧಿಕಾರಿ ಜೊತೆ ಚರ್ಚಿಸಿದರು.

‘ಈ ಕುರಿತು ಸಂಬಂಧಿಸಿದ ಸಚಿವರೊಂದಿಗೂ ಚರ್ಚೆ ಮಾಡಲಾಗುವುದು’ ಎಂದು ಅಭಯ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.