ADVERTISEMENT

ಸಾಂಬ್ರಾ: ತ್ಯಾಜ್ಯ ವಿಲೇವಾರಿ ಘಟಕಕ್ಕೆ ವಿರೋಧ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2020, 7:31 IST
Last Updated 22 ಸೆಪ್ಟೆಂಬರ್ 2020, 7:31 IST

ಬೆಳಗಾವಿ: ತಾಲ್ಲೂಕಿನ ಸಾಂಬ್ರಾ ಗ್ರಾಮಕ್ಕೆ ಸೇರಿದ ‘ಗಾಯರಾಣ’ ಜಾಗದಲ್ಲಿ ಗ್ರಾಮ ಪಂಚಾಯಿತಿಯಿಂದ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾಮಗಾರಿ ಕೈಬಿಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

‘ಗ್ರಾಮದ ನೂರಾರು ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ವಿಮಾನನಿಲ್ದಾಣ ನಿರ್ಮಾಣಕ್ಕೆ ಬಳಸಲಾಗಿದೆ. ಇದರಿಂದಾಗಿ ಬಹಳ ಮಂದಿ ಜಮೀನು ಕಳೆದುಕೊಂಡಿದ್ದೇವೆ. ಸಂಕಷ್ಟಕ್ಕೂ ಸಿಲುಕಿದ್ದೇವೆ. ಈಗ ಜಾನುವಾರುಗಳ ಮೇವಿಗೆ ಮೀಸಲಿಟ್ಟ 5 ಎಕರೆ ಜಾಗವನ್ನು ತ್ಯಾಜ್ಯ ವಿಲೇವಾರಿ ಘಟಕಕ್ಕೆ ಬಳಸಲು ಪಂಚಾಯಿತಿಯಿಂಂದದ ನಿರ್ಧಾರ ಕೈಗೊಳ್ಳಲಾಗಿದೆ. ಜನರೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಈ ತೀರ್ಮಾನಕ್ಕೆ ಬರಲಾಗಿದೆ. ಇದು ಸರಿಯಲ್ಲ’ ಎಂದು ಹೇಳಿದರು.

ಗ್ರಾಮಸ್ಥರಾದ ಎಸ್.ಆರ್. ದೇಸಾಯಿ, ಕೆ.ಎಸ್. ಚೌಗುಲೆ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.