ADVERTISEMENT

ಚುನಾವಣೆ: ಆಯುಧ ಠೇವಣಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2021, 14:00 IST
Last Updated 12 ಆಗಸ್ಟ್ 2021, 14:00 IST

ಬೆಳಗಾವಿ: ‘ಇಲ್ಲಿನ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ ನಿಮಿತ್ತ ಆಯುಧ ಅನುಜ್ಞಾ ಪತ್ರದಾರರು ಆಯುಧಗಳನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿ
ಠೇವಣಿ ಮಾಡಬೇಕು’ ಎಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಹಾಗೂ ಪೋಲಿಸ್ ಆಯುಕ್ತ ಡಾ.ಕೆ. ತ್ಯಾಗರಾಜನ್ ತಿಳಿಸಿದ್ದಾರೆ.

‘ಪಾಲಿಕೆಯ ಎಲ್ಲ 58 ವಾರ್ಡ್‌ಗಳಲ್ಲಿ ಸಾರ್ವತ್ರಿಕ ಚುನಾವಣೆ ಸೆ. 3ರಂದು ನಡೆಯಲಿದೆ. ಚುನಾವಣೆಯು ಶಾಂತಿಯುತ ಹಾಗೂ ಮುಕ್ತವಾಗಿ ನಡೆಯುವ ದೃಷ್ಟಿಯಿಂದ ಕ್ರಮ ವಹಿಸಲಾಗಿದೆ. ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಚುನಾವಣೆಯ ಅವಧಿಯಲ್ಲಿ ಆಯುಧ ಕಾಯ್ದೆ ಪ್ರಕಾರ, ಆಯುಧಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಹೀಗಾಗಿ, ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡಿ ಸ್ವೀಕೃತ ಪತ್ರಗಳನ್ನು ಪಡೆದುಕೊಳ್ಳಬೇಕು’ ಎಂದು ಆದೇಶಿಸಿದ್ದಾರೆ.

‘ಚುನಾವಣೆಯ ಫಲಿತಾಂಶವು ಘೋಷಣೆಯಾದ ವಾರದ ನಂತರ ಸಂಬಂಧಪಟ್ಟ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಆಯುಧಗಳನ್ನು ಬಿಡುಗಡೆ ಮಾಡಿ ಅನುಜ್ಞಾ ಪತ್ರದಾರರಿಗೆ ನೀಡುತ್ತಾರೆ. ಈ ಆದೇಶವು ಕರ್ತವ್ಯದ ಮೇಲಿರುವ ಪೋಲಿಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ, ಬ್ಯಾಂಕ್ ಭದ್ರತಾ ಸಿಬ್ಬಂದಿಗೆ ಮತ್ತು ಸರ್ಕಾರವು ಪೂರೈಸಿದ ಆಯುಧ ಹೊಂದಿರುವ ವಿವಿಧ ಇಲಾಖೆಗಳ ರಕ್ಷಣಾ ಸಿಬ್ಬಂದಿಗೆ ಅನ್ವಯಿಸುವುದಿಲ್ಲ’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.