ADVERTISEMENT

ಆಮ್ಲಜನ ಘಟಕ ಉದ್ಘಾಟನೆ ಶೀಘ್ರ

​ಪ್ರಜಾವಾಣಿ ವಾರ್ತೆ
Published 25 ಜೂನ್ 2021, 4:19 IST
Last Updated 25 ಜೂನ್ 2021, 4:19 IST
ಗೋಕಾಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ₹ 1.5 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಆಮ್ಲಜನಕ ಘಟಕ ನಿರ್ಮಾಣ ಕಾಮಗಾರಿಯನ್ನು ಶಾಸಕ ರಮೇಶ ಜಾರಕಿಹೊಳಿ ಪರಿಶೀಲನೆ ನಡೆಸಿದರು
ಗೋಕಾಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ₹ 1.5 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಆಮ್ಲಜನಕ ಘಟಕ ನಿರ್ಮಾಣ ಕಾಮಗಾರಿಯನ್ನು ಶಾಸಕ ರಮೇಶ ಜಾರಕಿಹೊಳಿ ಪರಿಶೀಲನೆ ನಡೆಸಿದರು   

ಗೋಕಾಕ: ಇಲ್ಲಿನ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ₹ 1.5 ಕೋಟಿ ವೆಚ್ಚದಲ್ಲಿ ವಿ.ಎಸ್.ಎ. ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ. ಸಾಮರ್ಥ್ಯದ ಆನ್ ಸೈಟ್ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಶಾಸಕ ರಮೇಶ ಜಾರಕಿಹೊಳಿ ಗುರುವಾರ ಭೇಟಿ ಪರಿಶೀಲನೆ ನಡೆಸಿದರು.

ಪ್ರಾಯೋಗಿಕವಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯ ತಾಲ್ಲೂಕು ಆಸ್ಪತ್ರೆಯಲ್ಲಿ ಪಿ.ಎಸ್.ಎ. ತಂತ್ರಜ್ಞಾನವುಳ್ಳ ಪ್ರತಿ ನಿಮಿಷಕ್ಕೆ 500 ಲೀಟರ್ ಉತ್ಪಾದನಾ ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕ ಅಳವಡಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ.

ಆ ನಿಟ್ಟಿನಲ್ಲಿ ಇಲ್ಲಿ ಆಮ್ಲಜನಕ ಉತ್ಪಾದನಾ ಘಟಕದ ನಿರ್ಮಾಣ ಕಾಮಗಾರಿ ಆರಂಭಗೊಂಡಿದ್ದು ಒಂದು ವಾರದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಇದು ಅತ್ಯಂತ ಉಪಯುಕ್ತವಾಗಲಿದೆ. ಕೊರೊನಾ ಮೂರನೇ ಅಲೆ ಎದುರಿಸಲು ಸಹ ಸಹಕಾರಿಯಾಗಲಿದೆ ಎಂದರು.

ADVERTISEMENT

ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರಾದ ಟಿ.ಆರ್.ಕಾಗಲ್ ಮತ್ತ ಮಡ್ಡೆಪ್ಪ ತೋಳಿನವರ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಮುತ್ತಣ್ಣ ಕೊಪ್ಪದ, ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ರವೀಂದ್ರ ಅಂಟಿನ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ವೈದ್ಯರಾದ ಡಾ. ಮಹೇಶ ಕೋಣಿ, ಡಾ. ಬಾಗಲಕೋಟೆ, ಡಾ. ಅಶೋಕ ಜಿರಗ್ಯಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.