
ಮುನವಳ್ಳಿ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಹಲವಾರು ಬದಲಾವಣೆ ತಂದಿವೆ ಎಂದು ಬೈಲಹೊಂಗಲ ಮತ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮತ್ತು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯ ವಿಷ್ಣು ಕಾರಭಾರಿ ಹೇಳಿದರು.
ಮಂಗಳವಾರ ಯಕ್ಕುಂಡಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಜರುಗಿದ ಸವದತ್ತಿ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಜಾಗೃತಿ ಮತ್ತು ಕಾರ್ಯಾಗಾರದಲ್ಲಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಲಕ್ಷ್ಮೀ, ಹಾಗೂ ಯುವನಿಧಿ ಯೋಜನೆಗಳು ಜನಸಾಮಾನ್ಯರಿಗೆ ಆರ್ಥಿಕ ಭದ್ರತೆ, ಆತ್ಮವಿಶ್ವಾಸ ಮೂಡಿಸುವುದರ ಜೊತೆಗೆ ಮಹಿಳೆಯರಿಗೆ ಆರ್ಥಿಕ ಒತ್ತಡ ಕಡಿಮೆ ಮಾಡಿದೆ. ಈ ಯೋಜನೆಗಳಿಂದ ವಂಚಿತರಾಗಿದ್ದರೆ ಅಂತವರು ಸಂಬಂಧಿಸಿದ ದಾಖಲೆ ಸಲ್ಲಿಸಿದರೆ ಅವರ ಸಮಸ್ಯೆಗೆ ಸ್ಪಂದಿಸುವುದಾಗಿ ತಿಳಿಸಿದರು.
ತಾಲ್ಲೂಕು ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷರಾದ ಶಿವಕುಮಾರ ರಾಠೋಡ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಈ ಎಲ್ಲ ಯೋಜನೆಗಳು ಮಹಿಳೆಯರ ಸಬಲೀಕರಣಕ್ಕೆ ತಂದ ಯೋಜನೆಗಳಾಗಿದ್ದು ಎಲ್ಲರೂ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಪಿಡಿಒ ವೈ.ಪಿ ಬೋಳಶೆಟ್ಟಿ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚೇತನಾ ಹಳ್ಳಿ ಮಾತನಾಡಿದರು.
ಗ್ರಾ.ಪಂ.ಸದಸ್ಯ ಹಸನಸಾಬ ಬಾರಿಗಿಡದ, ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸೈನಾಜ ಮುಜಾವರ, ಕಾರ್ಯದರ್ಶಿ ಸುಶೀಲಾ ವಿರೇಶನವರ, ರವಿ ತಿಮ್ಮೇಶಿ, ಬಸವರಾಜ ಹೂಗಾರ ಉಪಸ್ಥಿತರಿದ್ದರು. ಪ್ರಕಾಶ ಕಮ್ಮಾರ ನಿರೂಪಿಸಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.