ADVERTISEMENT

ಬೆಳಗಾವಿ: ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲು ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2020, 4:03 IST
Last Updated 28 ಅಕ್ಟೋಬರ್ 2020, 4:03 IST
ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ಉಪವಾಸ ಸತ್ಯಾಗ್ರಹದ ನೇತೃತ್ವವಹಿಸಿದ್ದಾರೆ.
ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ಉಪವಾಸ ಸತ್ಯಾಗ್ರಹದ ನೇತೃತ್ವವಹಿಸಿದ್ದಾರೆ.   
""

ಬೆಳಗಾವಿ: ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಬುಧವಾರ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ ಅಂಗವಾಗಿ ತಾಲ್ಲೂಕಿನ ಹಿರೇಬಾಗೇವಾಡಿಯಿಂದ ದ್ವಿಚಕ್ರ ವಾಹನ ಹಾಗೂ ಕಾರುಗಳಲ್ಲಿ ಸಮಾಜದವರು ಮೆರವಣಿಗೆ ಆರಂಭಿಸಿದ್ದಾರೆ.

ಆ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸ್ವಾಮೀಜಿ, ಸುವರ್ಣ ವಿಧಾನಸೌಧದತ್ತ ಹೊರಟರು. ಅವರೊಂದಿಗೆ ಸಮಾಜದವರೂ ತೆರಳಿದರು.

ಸತ್ಯಾಗ್ರಹ ಬೆಂಬಲಿಸಿ ಸ್ಥಳೀಯ ಘೋಷಣೆ ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT