ಮೂಡಲಗಿ: ‘ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ದೊರಕಿಸಿಕೊಡುವ ಹೋರಾಟ ನಿಲ್ಲದು, ಪ್ರಾಣ ಇರುವವರೆಗೆ ಹೋರಾಟ ಇರುವುದು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಶುಕ್ರವಾರ ಮೂಡಲಗಿಯಲ್ಲಿ ಸೌಹಾರ್ದ ಸಹಕಾರಿ ಸಂಘದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇತ್ತಿಚಿನ ಬೆಳವಣಿಗೆಯಿಂದ ನಮ್ಮ ಹೋರಾಟಕ್ಕೆ ಇನ್ನಷ್ಟು ಶಕ್ತಿಯನ್ನು ತಂದುಕೊಟ್ಟಿದೆ. ಸಮಾಜದ ಜನರು ಅಹಿತಕರವಾದ ವದಂತಿಗಳಿಗೆ ಕಿವಿಗೊಡಬಾರದು ಎಂದರು.
ಸಂಘಟನೆ, ಹೋರಾಟಗಳ ಸಂದರ್ಭದಲ್ಲಿ ಭಿನ್ನಾಭಿಪ್ರಾಯಗಳು ಬರುವುದು ಸಹಜವಾಗಿದೆ. ಮುಂದಿನ ದಿನಗಳಲ್ಲಿ ಅಂಥ ಭಿನ್ನಾಭಿಪ್ರಾಯಗಳನ್ನು ಸಮಾಜದ ಜನರ ಸಹಕಾರದೊಂದಿಗೆ ಸರಿದೂಗಿಸಿಕೊಂಡು ಸಂಘಟನೆಯನ್ನು ಇನ್ನಷ್ಟು ಗಟ್ಟಿಗೊಳಿಸಲಾಗುವುದು. ಪಂಚಮಸಾಲಿ ಸಮಾಜದ ಜನರು ಯಾವುದೇ ರೀತಿಯಲ್ಲಿ ವಿಚಲಿತರಾಗಬಾರದು ಎಂದರು.
ಪಂಚಮಸಾಲಿ ಸಮಾಜದ ಸಂಘಟನೆ ಬೆಳಗಾವಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಗಪ್ಪ ಪಿರೋಜಿ, ಪಂಚಮಸಾಲಿ ಯುವ ಘಟಕದ ಅಧ್ಯಕ್ಷ ಸಂಗಮೇಶ ಕೌಜಲಗಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.