ADVERTISEMENT

ಸ್ನೇಹಕ್ಕೆ ಧಕ್ಕೆಯಾದರೆ ಸಂಘರ್ಷ: ಸ್ವಾಮೀಜಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2020, 13:43 IST
Last Updated 1 ನವೆಂಬರ್ 2020, 13:43 IST
ಬಸವ ಜಯ ಮೃತ್ಯುಂಜಯ ಸ್ವಾಮೀಜಿ
ಬಸವ ಜಯ ಮೃತ್ಯುಂಜಯ ಸ್ವಾಮೀಜಿ   

ಬೆಳಗಾವಿ: ‘ನಾವಿಲ್ಲಿ ರಾಜ್ಯೋತ್ಸವ ಸಂಭ್ರಮದಲ್ಲಿರುವಾಗ, ಮಹಾರಾಷ್ಟ್ರ ಸಚಿವರು ಕಪ್ಪುಪಟ್ಟಿ ಧರಿಸಿ ಕರಾಳ ದಿನಾಚರಣೆ ನಡೆಸಿರುವುದು ಖಂಡನೀಯ. ರಾಣಿ ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿರಾಯಣ್ಣನ ರೀತಿ ನಾವು ಸ್ನೇಹ ಬಯಸುತ್ತೇವೆ. ಸ್ನೇಹಕ್ಕೆ ಧಕ್ಕೆಯಾದಾಗ ಸಂಘರ್ಷಕ್ಕೆ ಇಳಿಯಬೇಕಾಗುತ್ತದೆ’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.

ರಾಜ್ಯೋತ್ಸವ ಅಂಗವಾಗಿ ಭಾನುವಾರ ಇಲ್ಲಿನ ಚನ್ನಮ್ಮ ವೃತ್ತದಲ್ಲಿ ರಾಣಿ ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಮಹಾರಾಷ್ಟ್ರ ನಾಯಕರು ಹಾಗೂ ಕೆಲ ಸಂಘಟನೆಗಳವರು ಕನ್ನಡಿಗರ ಸ್ವಾಭಿಮಾನ ಕೆಣಕುವ ಪ್ರಯತ್ನ ಮಾಡುತ್ತಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶಿಸಿ ಉಭಯ ರಾಜ್ಯಗಳ ನಡುವೆ ಸೌಹಾರ್ದ ತರಬೇಕು. ಒಕ್ಕೂಟ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಮಲತಾಯಿ ಧೋರಣೆ ಮಾಡಬಾರದು’ ಎಂದು ಒತ್ತಾಯಿಸಿದರು.

ADVERTISEMENT

‘ಬೆಳಗಾವಿಯನ್ನು 2ನೇ ರಾಜಧಾನಿಯನ್ನಾಗಿ ಘೋಷಿಸಬೇಕು. ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.