ಬಸವಜಯ ಮೃತ್ಯುಂಜಯ ಸ್ವಾಮೀಜಿ
ಬೆಳಗಾವಿ: ‘ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ ‘2ಎ’ ಮೀಸಲಾತಿ ನೀಡಬೇಕು ಮತ್ತು ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಮೆ ಕೇಳಬೇಕು’ ಎಂದು ಆಗ್ರಹಿಸಿ ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಗರದಲ್ಲಿ ನಡೆಯುತ್ತಿದ್ದ ಧರಣಿಯನ್ನು ಗುರುವಾರ ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.
‘ಮೀಸಲಾತಿ ವಿಷಯದಲ್ಲಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 21ರಂದು ಬೆಂಗಳೂರಿನಲ್ಲಿ ಸಭೆ ಕರೆದಿದ್ದಾರೆ. ಹೀಗಾಗಿ ನಮ್ಮ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದೇವೆ. ಸಭೆಯಲ್ಲಿ ಕೈಗೊಳ್ಳುವ ನಿರ್ಣಯ ಆಧರಿಸಿ ಮುಂದಿನ ಹೆಜ್ಜೆ ಇರಿಸುತ್ತೇವೆ’ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ‘ಪ‍್ರಜಾವಾಣಿ’ಗೆ ತಿಳಿಸಿದರು.
‘ಬೆಳಗಾವಿಯಲ್ಲಿ ನಡೆದ ಹೋರಾಟದಲ್ಲಿ ಪೊಲೀಸರು ಮಾಡಿದ ಲಾಠಿಚಾರ್ಜ್‌ನಿಂದ ಗಾಯಗೊಂಡಿರುವ ಸಮಾಜದ ಕಾರ್ಯಕರ್ತರ ಮನೆಗಳಿಗೂ ತೆರಳಿ, ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.