ADVERTISEMENT

ಜನ, ಜಾನುವಾರು ಸುರಕ್ಷತೆ: ಕ್ರಮಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 11:03 IST
Last Updated 23 ಜುಲೈ 2021, 11:03 IST
   

ಬೆಳಗಾವಿ: ‘ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜನ-ಜಾನುವಾರು ರಕ್ಷಣೆಗೆ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಜಿಲ್ಲಾ ಉಸ್ತವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

‘ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಔಷಧೋಪಚಾರ ಕಲ್ಪಿಸಬೇಕು. ಆಹಾರದ ವ್ಯವಸ್ಥೆ ಮಾಡಬೇಕು. ರಸ್ತೆ ಅಥವಾ ಸೇತುವೆ ಹಾಳಾಗಿದ್ದರೆ ಕೂಡಲೇ ದುರಸ್ತಿಗೆ ಕ್ರಮ ವಹಿಸಬೇಕು. ಕೆರೆ–ಕಟ್ಟೆಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ, ಎಲ್ಲಾ ಕೆಲಸಗಳನ್ನೂ ಮುತುವರ್ಜಿಯಿಂದ ಅತ್ಯಂತ ಕಟ್ಟುನಿಟ್ಟಾಗಿ ನಿರ್ವಹಿಸಬೇಕು’ ಎಂದು ನಿರ್ದೇಶನ ನೀಡಿದ್ದಾರೆ.

‘ವಿವಿಧ ಇಲಾಖೆಗಳ ಮೂಲಕ (ಆರೋಗ್ಯ, ಕಂದಾಯ, ಲೋಕೋಪಯೋಗಿ, ಪೊಲೀಸ್) ಜನರಲ್ಲಿ ಜಾಗೃತಿಯನ್ನು ಮೂಡಿಸುವ ಕೆಲಸವನ್ನು ಮಾಡಬೇಕು. ಜನರ ರಕ್ಷಣೆಯ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯವಾಗಿದೆ. ಕರ್ತವ್ಯಲೋಪ ಎಸಗಿದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.