ADVERTISEMENT

ಬೆಳಗಾವಿ ಡಿಸಿ ಕಚೇರಿ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2020, 9:07 IST
Last Updated 11 ಡಿಸೆಂಬರ್ 2020, 9:07 IST
ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಮೇಲಿಂದ ಜಿಗಿದು ಶುಕ್ರವಾರ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದರು
ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಮೇಲಿಂದ ಜಿಗಿದು ಶುಕ್ರವಾರ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದರು   

ಬೆಳಗಾವಿ: ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಶುಕ್ರವಾರ ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ತಡೆದು ವಶಕ್ಕೆ ಪಡೆದರು.

ಕೇರಳ ಮೂಲದವಾಮದೇವನ್ ಆತ್ಮಹತ್ಯೆಗೆ ಯತ್ನಿಸಿ ಗೊಂದಲ ಸೃಷ್ಟಿಸಿದ ವ್ಯಕ್ತಿ. ‘ರಾಯಬಾಗದ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಆರೂವರೆ ತಿಂಗಳಿನಿಂದ ನನಗೆ ಸಂಬಳ ಬಂದಿಲ್ಲ. ವರ್ಗಾವಣೆಯನ್ನೂ ಮಾಡಲಾಗಿದೆ. ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಮತ್ತು ಪೊಲೀಸ್ ಠಾಣೆಗೆ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ. ಇದರಿಂದ ಜೀವನ ನಿರ್ವಹಣೆಗೆ ಬಹಳ ತೊಂದರೆಯಾಗಿದೆ. ಹೀಗಾಗಿ, ಆತ್ಮಹತ್ಯೆಗೆ ಮುಂದಾದೆ’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಡ್ಯೂಟಿಯಲ್ಲಿದ್ದ ಪೊಲೀಸರ ಸಮಯಪ್ರಜ್ಞೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿತು. ವ್ಯಕ್ತಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.