ADVERTISEMENT

ಪಿಎಲ್‌ಡಿ ಬ್ಯಾಂಕ್‌; ಚುನಾವಣೆ 7ರಂದು

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2018, 14:22 IST
Last Updated 5 ಸೆಪ್ಟೆಂಬರ್ 2018, 14:22 IST

ಬೆಳಗಾವಿ: ತೀವ್ರ ಕುತೂಹಲ ಕೆರಳಿಸಿರುವ, ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಬೆಳಗಾವಿ ಪಿಎಲ್‌ಡಿ (ಬೆಳಗಾವಿ ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ) ಬ್ಯಾಂಕ್‌ನ ಅಧ್ಯಕ್ಷ– ಉಪಾಧ್ಯಕ್ಷರ ಚುನಾವಣೆಯನ್ನು ಇದೇ ತಿಂಗಳ 7ರಂದು ನಡೆಸಲು ಚುನಾವಣಾಧಿಕಾರಿಯಾಗಿರುವ ತಹಶೀಲ್ದಾರ್‌ ಮಂಜುಳಾ ನಾಯಕ ತೀರ್ಮಾನಿಸಿದ್ದಾರೆ.

‘ಧಾರವಾಡ ಹೈಕೋರ್ಟ್‌ ನಿರ್ದೇಶನದ ಮೇರೆಗೆ ಚುನಾವಣೆಯನ್ನು 7ರಂದು ನಿಗದಿ ಮಾಡಿದ್ದೇನೆ. ಚುನಾವಣಾ ಪ್ರಕ್ರಿಯೆಯಂತೆ ಬ್ಯಾಂಕಿನ ಎಲ್ಲ 14 ನಿರ್ದೇಶಕರಿಗೆ ನೋಟಿಸ್‌ ನೀಡಿದ್ದೇನೆ. ಅಂದು ಬೆಳಿಗ್ಗೆ 10ರಿಂದ 11ಗಂಟೆಯೊಳಗೆ ನಾಮಪತ್ರ ಸಲ್ಲಿಸಲು ಅವಕಾಶ ಇರುತ್ತದೆ. ಎರಡು ತಾಸು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ವಾಪಸ್‌ ಪಡೆಯಲು ಒಂದು ಗಂಟೆ ಸಮಯಾವಕಾಶ ನೀಡಲಾಗುವುದು. ನಂತರ ಮತದಾನ ನಡೆಯಲಿದೆ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT