ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಪೋಕ್ಸೊ ಪ್ರಕರಣದಡಿ ಬಂಧಿತನಾಗಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಮೊಹಮ್ಮದ್ ಸಾದಿಕ್ ಮೀಯಾಬೇಗ್ (39) ಎಂಬುವನನ್ನು ಅಮಾನತು ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಬಿ. ಎ. ಮೇಕನಮರಡಿ ತಿಳಿಸಿದ್ದಾರೆ.
10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡು ಶಿಕ್ಷಕನನ್ನು ಚಿಕ್ಕೋಡಿ ಠಾಣೆ ಪೊಲೀಸರು ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.