ಪ್ರಾತಿನಿಧಿಕ ಚಿತ್ರ
ಬೆಳಗಾವಿ: ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅಪರಾಧಿಗೆ ಇಲ್ಲಿನ ನ್ಯಾಯಾಲಯವು 30 ವರ್ಷ ಕಠಿಣ ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಿ, ಶನಿವಾರ ತೀರ್ಪು ನೀಡಿದೆ.
ಕಣಬರ್ಗಿಯ ನಿವಾಸಿ ದತ್ತಾತ್ರೇಯ ಖಾನಾಪುರೆ ಶಿಕ್ಷೆಗೆ ಒಳಗಾದವ. 2019ರ ಮೇ 13ರಂದು ಬಾಲಕಿಯ ಮೇಲೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಬಾಲಕಿಯ ಪೋಷಕರು ಮಾಳಮಾರುತಿ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು, ‘ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಸಂತ್ರಸ್ತೆ ₹4 ಲಕ್ಷ ಪರಿಹಾರ ಪಡೆಯುವಂತೆ ಮತ್ತು ಆ ಹಣವನ್ನು ರಾಷ್ಟ್ರಿಕೃತ ಬ್ಯಾಂಕ್‌ನಲ್ಲಿ 5 ವರ್ಷಗಳವರೆಗೆ ಠೇವಣಿಯಾಗಿ ಇಡಿ’ ಎಂದು ಆದೇಶಿಸಿದ್ದಾರೆ.
ತನಿಖಾಧಿಕಾರಿಗಳಾದ ಜಗದೀಶ ಹಂಚಿನಾಳ ಮತ್ತು ಬಿ.ಆರ್.ಗಡ್ಡೇಕರ ಅವರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.