
ಪ್ರಜಾವಾಣಿ ವಾರ್ತೆಜೈಲು (ಪ್ರಾಧಿನಿಧಿಕ ಚಿತ್ರ)
– ಐಸ್ಟಾಕ್ ಚಿತ್ರ
ಬೈಲಹೊಂಗಲ: ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೊ ಪ್ರಕರಣದಡಿ ವಿಚಾರಣೆ ನಡೆದು ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಲಾಗಿದೆ.
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು ರುಜುವಾತಾದ ಹಿನ್ನೆಲೆಯಲ್ಲಿ ಆದೇಶ ಪ್ರಕಟವಾಗಿದೆ. ನೊಂದ ಬಾಲಕಿಗೆ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಕೊಡಬೇಕೆಂದು ಜಿಲ್ಲಾ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಆದೇಶ ಹೊರಡಿಸಿದ್ದಾರೆ.
ಬಾಲಕಿ ಪರವಾಗಿ ಸರ್ಕಾರಿ ಅಭಿಯೋಜಕ ಎಲ್.ವ್ಹಿ.ಪಾಟೀಲ ವಾದ ಮಂಡಿಸಿದ್ದರು. ತಾಲ್ಲೂಕಿನ ತಿಗಡಿ ಗ್ರಾಮದ ಆರೋಪಿ ಆಜಾದ ಮೆಹಬೂಬಸುಭಾನಿ ಕಿಲ್ಲೇದಾರ (31) ಶಿಕ್ಷೆಗೆ ಒಳಗಾದವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.