ಬೆಳಗಾವಿ: ‘ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ(ಆರ್‌ಸಿಯು)ದಿಂದ ಜುಲೈ 26 ಮತ್ತು 27ರಿಂದ ನಿಗದಿಯಾಗಿದ್ದ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯ ಪರೀಕ್ಷೆಗಳನ್ನು ಮಳೆ ಮತ್ತು ಪ್ರವಾಹದ ಕಾರಣದಿಂದ ಮುಂದೂಡಲಾಗಿದೆ’ ಎಂದು ಮೌಲ್ಯಮಾಪನ ಕುಲಸಚಿವ ಪ್ರೊ.ಎಸ್.ಎಂ. ಹುರಕಡ್ಲಿ ತಿಳಿಸಿದ್ದಾರೆ.
‘ಜನಪ್ರತಿನಿಧಿಗಳು, ಪೋಷಕರು ಮತ್ತು ವಿದ್ಯಾರ್ಥಿಗಳ ಮನವಿ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಎಲ್ಲ ಪರೀಕ್ಷೆಗಳನ್ನೂ ಆ.2ರಿಂದ ಮರುನಿಗದಿಪಡಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರದಲ್ಲೆ ಪ್ರಕಟಿಸಲಾಗುವುದು’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.