
ಚನ್ನಮ್ಮನ ಕಿತ್ತೂರು: ಇಲ್ಲಿನ ವಿದ್ಯುತ್ ಉಪಕೇಂದ್ರಗಳಲ್ಲಿ ಡಿ.27ರಂದು ಬೆಳಿಗ್ಗೆ 10ಗಂಟೆಯಿಂದ ಸಂಜೆ 5ರ ವರೆಗೆ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಕಿತ್ತೂರು ಹೆಸ್ಕಾಂ ಉಪವಿಭಾಗದಲ್ಲಿ ಬರುವಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕೈಗಾರಿಕೆ ಪ್ರದೇಶ, ಕಿತ್ತೂರು ಪಟ್ಟಣ ಪಂಚಾಯಿತಿ, ಅಂಬಡಗಟ್ಟಿ, ಅವರಾದಿ, ಬೈಲೂರು, ದೇಗಾಂವ, ಹಿರೇನಂದಿಹಳ್ಳಿ, ಕುಲವಳ್ಳಿ, ಕಲಭಾವಿ, ನಿಚ್ಚಣಕಿ, ತಿಗಡೊಳ್ಳಿ, ಉಗರಖೋಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಹಾಗೂ ನೀರಾವರಿ ಪಂಪ್‌ಸೆಟ್‌ಗಳ ವಿದ್ಯುತ್ ವ್ಯತ್ಯಯ ಆಗಲಿದೆ.
ಎಂ.ಕೆ. ಹುಬ್ಬಳ್ಳಿಯ ವಿದ್ಯುತ್ ಉಪಕೇಂದ್ರಗಳಲ್ಲಿ ಡಿ.28ರಂದು ಬೆಳಿಗ್ಗೆ 9ರಿಂದ ಸಂಜೆ 5ರ ವರೆಗೆ ಎಂ.ಕೆ. ಹುಬ್ಬಳ್ಳಿ, ಕಾದರವಳ್ಳಿ, ವೀರಾಪುರ, ಹುಣಸೀಕಟ್ಟಿ, ತುರಮರಿ, ದೇವರಶೀಗಿಹಳ್ಳಿ, ಮಾರ್ಗನಕೊಪ್ಪ, ಕ್ಯಾರಕೊಪ್ಪ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಹಾಗೂ ನೀರಾವರಿ ಪಂಪ್‌ಸೆಟ್‌ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.