ADVERTISEMENT

ಬೆಳಗಾವಿ: ಎನ್‌ಸಿಸಿ ಕೆಡೆಟ್‌ಗೆ ಕೋರೆ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 8:34 IST
Last Updated 7 ಫೆಬ್ರುವರಿ 2022, 8:34 IST
ದೆಹಲಿಯಲ್ಲಿ ಇತ್ತೀಚೆಗೆ ನಡೆದ ಗಣರಾಜ್ಯೋತ್ಸವ ಕವಾಯತಿನಲ್ಲಿ ಪಾಲ್ಗೊಂಡ ಬೆಳಗಾವಿಯ ಕೆಎಲ್‌ಇ ಲಿಂಗರಾಜ ಕಾಲೇಜಿನ ಎನ್‌ಸಿಸಿ ಕೆಡೆಟ್ ಅರುಣಕುಮಾರ ಎಸ್. ಅವರನ್ನು ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಸೋಮವಾರ ಅಭಿನಂದಿಸಿದರು
ದೆಹಲಿಯಲ್ಲಿ ಇತ್ತೀಚೆಗೆ ನಡೆದ ಗಣರಾಜ್ಯೋತ್ಸವ ಕವಾಯತಿನಲ್ಲಿ ಪಾಲ್ಗೊಂಡ ಬೆಳಗಾವಿಯ ಕೆಎಲ್‌ಇ ಲಿಂಗರಾಜ ಕಾಲೇಜಿನ ಎನ್‌ಸಿಸಿ ಕೆಡೆಟ್ ಅರುಣಕುಮಾರ ಎಸ್. ಅವರನ್ನು ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಸೋಮವಾರ ಅಭಿನಂದಿಸಿದರು   

ಬೆಳಗಾವಿ: ದೆಹಲಿಯಲ್ಲಿ ಇತ್ತೀಚೆಗೆ ನಡೆದ ಗಣರಾಜ್ಯೋತ್ಸವ ಕವಾಯತಿನಲ್ಲಿ ಪಾಲ್ಗೊಂಡ ಕೆಎಲ್‌ಇ ಲಿಂಗರಾಜ ಕಾಲೇಜಿನ ಎನ್‌ಸಿಸಿ ಕೆಡೆಟ್ ಅರುಣಕುಮಾರ ಎಸ್. ಅವರನ್ನು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರು ಸೋಮವಾರ ಅಭಿನಂದಿಸಿದರು.

‘ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಅರುಣಕುಮಾರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾರೆ’ ಎಂದರು.

‘ಎನ್‌ಸಿಸಿಯು ಕೆಡೆಟ್‌ಗಳಲ್ಲಿ ಶಿಸ್ತು ಹಾಗೂ ಒಗ್ಗಟ್ಟನ್ನು ಬೆಳೆಸುತ್ತದೆ. ಯುವಕರು ಸೇನೆ ಸೇರಿ ದೇಶ ಸೇವೆಯಲ್ಲಿ ತೊಡಗಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಬಿ.ಆರ್. ಪಾಟೀಲ, ಲಿಂಗರಾಜ ಕಾಲೇಜಿನ ಪ್ರಾಚಾರ್ಯ ಡಾ.ಬಿ.ಎಂ. ತೇಜಸ್ವಿ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಸಿ. ರಾಮರಾವ್,ಎನ್‌ಸಿಸಿ ಅಧಿಕಾರಿ ಕ್ಯಾ.ಡಾ.ಮಹೇಶ ಸಿ.ಗುರನಗೌಡರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.