ADVERTISEMENT

ದಶಕದಿಂದ ನನೆಗುದಿಗೆ ಬಿದ್ದಿದ್ದ 240 ಮನೆಗಳ ನಿರ್ಮಾಣಕ್ಕೆ ಯೋಜನೆಗೆ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2022, 6:16 IST
Last Updated 27 ಜೂನ್ 2022, 6:16 IST
ಬೆಳಗಾವಿಯಲ್ಲಿ ಸೋಮವಾರ 240 ಮನೆ ನಿರ್ಮಾಣಕ್ಕೆ ಶಾಸಕ ಅಭಯ ಪಾಟೀಲ ಭೂಮಿಪೂಜೆ ನೆರವೇರಿಸಿದರು
ಬೆಳಗಾವಿಯಲ್ಲಿ ಸೋಮವಾರ 240 ಮನೆ ನಿರ್ಮಾಣಕ್ಕೆ ಶಾಸಕ ಅಭಯ ಪಾಟೀಲ ಭೂಮಿಪೂಜೆ ನೆರವೇರಿಸಿದರು   

ಬೆಳಗಾವಿ: ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ 240 ಮನೆಗಳ ನಿರ್ಮಾಣಕ್ಕೆ ಶಾಸಕ ಅಭಯ ಪಾಟೀಲ ಸೋಮವಾರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಶಾಸಕ, '2013ರಲ್ಲೇ ನಗರದ ಹಲವಾರು ಜನರು ಪಾಲಿಕೆಗೆ ಹಣ ತುಂಬಿದ್ದರು.ಬೇರೆ ಶಾಸಕರು ಬಂದ ನಂತರಈ ವಸತಿ ಯೋಜನೆ ನನೆಗುದಿಗೆ ಬಿದ್ದಿತ್ತು. ಈಗ ಮತ್ತೆ ಚಾಲನೆ ದೊರಕಿದ್ದು, ಇನ್ನು 15 ತಿಂಗಳಲ್ಲಿ ಈ ವಸತಿ ನಿರ್ಮಾಣದ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ'ಎಂದರು.

ಈ ಹಿಂದೆ ಮನೆ ಹಂಚಿಕೆಯಲ್ಲಿ ಆದ ಯಾವ ಗೊಂದಲವೂ ಇಲ್ಲಿ ಆಗುವುದಿಲ್ಲ. ಪ್ರಾಮಾಣಿಕವಾಗಿ, ಪಾರದರ್ಶಕವಾಗಿ ಮನೆ ವಿತರಿಸುವ ಕಾರ್ಯ ಆಗುತ್ತದೆ ಎಂದು ಹೇಳಿದರು.

ADVERTISEMENT

ಈಗಾಗಲೇ ವಸತಿ ಸಲುವಾಗಿ ಸರ್ಕಾರಕ್ಕೆ ಹಣ ಪಾವತಿ ಮಾಡಿದ ಸಾರ್ವಜನಿಕರೇ ಇಲ್ಲಿ ಪಾಲಾನುಭವಿಗಳಾಗುತ್ತಾರೆ ಎಂದೂ ಹೇಳಿದರು.

ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ, ಉಪ ಆಯುಕ್ತೆ ಹುಗ್ಗಿ, ಪಾಲಿಕೆ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.