ADVERTISEMENT

ಲದ್ದಿ ಹುಳು ಬಾಧೆ‌: ಅಧಿಕಾರಿಗಳಿಂದ ಪರಿಶೀಲನೆ

ಪ್ರಜಾವಾಣಿ ವರದಿ ಫಲಶ್ರತಿ

​ಪ್ರಜಾವಾಣಿ ವಾರ್ತೆ
Published 16 ಜುಲೈ 2019, 11:13 IST
Last Updated 16 ಜುಲೈ 2019, 11:13 IST
ಗೋವಿನಜೋಳದಲ್ಲಿ ಲದ್ದಿ ಹುಳು ಕಾಟ ಕಾಣಿಸಿಕೊಂಡಿರುವುದನ್ನು ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಲಾನಿ ಮೊಕಾಶಿ ಹಾಗೂ ಅಧಿಕಾರಿಗಳು ಪರಿಶೀಲಿಸಿದರು‌
ಗೋವಿನಜೋಳದಲ್ಲಿ ಲದ್ದಿ ಹುಳು ಕಾಟ ಕಾಣಿಸಿಕೊಂಡಿರುವುದನ್ನು ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಲಾನಿ ಮೊಕಾಶಿ ಹಾಗೂ ಅಧಿಕಾರಿಗಳು ಪರಿಶೀಲಿಸಿದರು‌   

ಬೆಳಗಾವಿ: ಜಿಲ್ಲೆಯಲ್ಲಿ ಗೋವಿನಜೋಳಕ್ಕೆ ಲದ್ದಿ ಹುಳು ಬಾಧೆ ಕಾಣಿಸಿಕೊಂಡಿರುವುದರಿಂದ ಆಗುತ್ತಿರುವ ಹಾನಿಯ ಕುರಿತು ಪರಿಶೀಲಿಸಲು ಹಿರಿಯ ಅಧಿಕಾರಿಗಳು ಕ್ಷೇತ್ರ ಭೇಟಿಯನ್ನು ತೀವ್ರಗೊಳಿಸಿದ್ದಾರೆ.

‘ಬರದ ಗಾಯದ ಮೇಲೆ ಲದ್ದಿ ಹುಳು ಬರೆ’ ಶೀರ್ಷಿಕೆಯಲ್ಲಿ ‘ಪ್ರಜಾವಾಣಿ’ಯಲ್ಲಿ ಸೋಮವಾರ ಪ್ರಕಟವಾಗಿದ್ದ ವರದಿಯಿಂದ ಎಚ್ಚೆತ್ತ ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಲಾನಿ ಮೊಕಾಶಿ, ತಮ್ಮ ಅಧಿಕಾರಿಗಳೊಂದಿಗೆ ಜಮೀನುಗಳಿಗೆ ತೆರಳಿ ರೈತರಿಂದ ಮಾಹಿತಿ ಪಡೆದರು. ಕೀಟಗಳಿಂದ ಆಗುವ ಬಾಧೆಯನ್ನು ನಿಯಂತ್ರಣಕ್ಕೆ ತರಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಲಹೆ ನೀಡಿದರು. ಅಭಿಯಾನದ ರೀತಿಯಲ್ಲಿ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಅವಶ್ಯ ಕೀಟನಾಶಕ ರೈತ ಸಂಪರ್ಕ ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ದೊರೆಯುತ್ತದೆ. ಅದನ್ನು ಬಳಸ‌ಬೇಕು. ಹೆಚ್ಚಿನ ಮಾಹಿತಿಯನ್ನು ರೈತ ಸಂಪರ್ಕ ಕೇಂದ್ರದಲ್ಲಿ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.