ಚಿಕ್ಕೋಡಿ: ‘ಚಿಕ್ಕೋಡಿ– ಸದಲಗಾ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಶಾಸಕ ಗಣೇಶ ಹುಕ್ಕೇರಿ ಹಾಗೂ ನಾನು ಸೇರಿ 2023–2024ರಲ್ಲಿ ₹330 ಕೋಟಿ ಅನುದಾನ ಮಂಜೂರು ಮಾಡಿಸಿದ್ದೇನೆ. ಒಂದು ವರ್ಷದೊಳಗೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು’ ಎಂದು ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹೇಳಿದರು.
ತಾಲ್ಲೂಕಿನ ಯಕ್ಸಂಬಾ ಪಟ್ಟಣದ ಅನ್ನಪೂರ್ಣೇಶ್ವರಿ ಸಭಾಭವನದ ಆವರಣದಲ್ಲಿ ತಮ್ಮ 78ನೇ ಜನ್ಮ ದಿನಾಚರಣೆಯ ಅಂಗವಾಗಿ, ಅಭಿಮಾನಿಗಳಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ‘ಕಳೆದ 15 ವರ್ಷಗಳಿಂದ ಚಿಕ್ಕೋಡಿ– ಸದಲಗಾ ಶಾಸಕನಾಗಿ ಗಣೇಶ ಹುಕ್ಕೇರಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ’ ಎಂದರು.
ಶಾಸಕ ಗಣೇಶ ಹುಕ್ಕೇರಿ ಮಾತನಾಡಿ, ‘ಮಾರ್ಚ್ 7ರಂದು ಮಂಡನೆ ಮಾಡಲಿರುವ ರಾಜ್ಯ ಬಜೆಟ್‌ನಲ್ಲಿ ಚಿಕ್ಕೋಡಿಗೆ ಕ್ಯಾನ್ಸರ್ ಆಸ್ಪತ್ರೆಯನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಕಾರ್ಯಕರ್ತರ ಸಹಕಾರದಿಂದ ಕ್ಷೇತ್ರ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಿದೆ’ ಎಂದು ಭರವಸೆ ನೀಡಿದರು.
ಕಾಂಗ್ರೆಸ್ ಮುಖಂಡ ರವೀಂದ್ರ ಮಿರ್ಜೆ, ಸದಲಗಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅನಿಲ ಪಾಟೀಲ ಮುಂತಾದವರು ಪ್ರಕಾಶ ಹುಕ್ಕೇರಿ ಅವರು ಕಳೆದ 5 ದಶಕಗಳಿಂದ ಮಾಡಿರುವ ಸಾಧನೆಯನ್ನು ವಿವರಿಸಿದರು.
ಅಂಗವಿಕಲರು, ವಯೋವೃದ್ಧರು, ವಿಧವೆ ಮುಂತಾದವರಿಗೆ ಪಿಂಚಣಿ ಪ್ರಮಾಣ ಪತ್ರಗಳನ್ನು ವಿತರಿಸಿದರು. ಅಂಗವಿಕಲರಿಗೆ ಮೂರು ಚಕ್ರದ ಬೈಕ್, ಕಟ್ಟಡ ಕಾರ್ಮಿಕರಿಗೆ ಕಿಟ್, ರೈತರಿಗೆ ಬೀಜದ ಕಿಟ್ ಮುಂತಾದವುಗಳನ್ನು ವಿತರಣೆ ಮಾಡಲಾಯಿತು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಣ್ಣಾಸಾಹೇಬ ಹವಲೆ, ರಾಜಶೇಖರ ಮಿರ್ಜೆ, ಅನಿಲ ಪಾಟೀಲ, ರವೀಂದ್ರ ಮಿರ್ಜೆ, ರಾಮಾ ಮಾನೆ, ಪ್ರದೀಪ ಜಾಧವ, ಸತೀಶ ಕುಲಕರ್ಣಿ, ಆರ್ ಡಿ ಪಾಟೀಲ, ಬಾಳಾಸಾಹೇಬ ಪಾಟೀಲ, ಪಾಂಡುರಂಗ ಮಾನೆ, ಸಂಜಯ ಕುಡಚೆ, ಅರುಣ ದೇಸಾಯಿ, ಮಹಾದೇವ ಮುರಾಳೆ, ಎಸ್.ಎಸ್. ನಸಲಾಪೂರೆ ಭಾಗವಹಿಸಿದ್ದರು.
ಇದಕ್ಕೂ ಮೊದಲು ₹2.50 ಕೋಟಿ ಮೊತ್ತದಲ್ಲಿ ಯಕ್ಸಂಬಾ ಪಟ್ಟಣ ಪಂಚಾಯಿತಿಯ ಕಟ್ಟಡದ ಶಂಕುಸ್ಥಾಪನೆಯನ್ನು ಪ್ರಕಾಶ ಹುಕ್ಕೇರಿ ನೆರವೇರಿಸಿದರು. ಶಾಸಕ ಗಣೇಶ ಹುಕ್ಕೇರಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಸುನೀಲ ಸಪ್ತಸಾಗರ, ಉಪಾಧ್ಯಕ್ಷೆ ಸುಜಾತಾ ಚಿತಳೆ, ಉಪ ವಿಭಾಗಾಧಿಕಾರಿ ಸುಭಾಷ ಸಂಪಗಾಂವಿ, ತಹಶೀಲ್ದಾರ ಚಿದಂಬರ ಕುಲಕರ್ಣಿ, ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ, ಮುಖ್ಯಾಧಿಕಾರಿ ಡಿ ಕೆ ತಾವಸೆ ಹಲವರು ಉಪಸ್ಥಿತರಿದ್ದರು.
Quote - ಮುಂಬರುವ ದಿನಗಳಲ್ಲಿ ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡಲಿದ್ದಾರೆ ಗಣೇಶ ಹುಕ್ಕೇರಿ ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.