ADVERTISEMENT

ಕಾಂಗ್ರೆಸ್‌ ನಿರ್ಧಾರ ಆಧರಿಸಿ ನನ್ನ ತೀರ್ಮಾನ ‍ಪ್ರಕಟಿಸುವೆ: ಪ್ರಕಾಶ ಹುಕ್ಕೇರಿ

​ಪ್ರಜಾವಾಣಿ ವಾರ್ತೆ
Published 30 ಜನವರಿ 2021, 16:01 IST
Last Updated 30 ಜನವರಿ 2021, 16:01 IST
   

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮೊದಲು ಉಪ ಚುನಾವಣೆ ಘೋಷಣೆಯಾಗಲಿ. ಆಗ ಕಾಂಗ್ರೆಸ್ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದನ್ನು ಆಧರಿಸಿ ನಾನು ಮುಂದಿನ ತೀರ್ಮಾನ ಮಾಡುತ್ತೇನೆ’ ಎಂದು ಕಾಂಗ್ರೆಸ್ ಮುಖಂಡ ಪ್ರಕಾಶ ಹುಕ್ಕೇರಿ ಪ್ರತಿಕ್ರಿಯಿಸಿದರು.

ಇಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿ ನೋಡೋಣ’ ಎಂದರು.

‘ಗಡಿ ವಿಚಾರ ಮುಗಿದು ಹೋದ ಅಧ್ಯಾಯ. ಪದೇ ಪದೆ ಅದನ್ನು ಪ್ರಸ್ತಾಪಿಸುವ ಅಗತ್ಯವಿಲ್ಲ. ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಿ ಸಾಕಷ್ಟು ಬಾರಿ ಅಧಿವೇಶಗಳನ್ನು ಮಾಡಲಾಗಿದೆ. ವೈದ್ಯಕೀಯ ಕಾಲೇಜನ್ನೂ ಆರಂಭಿಸಲಾಗಿದೆ. ಮಹಾರಾಷ್ಟ್ರದವರು ತೆಗೆಯುವ ತಗಾದೆಗೆ ಮಹತ್ವ ಕೊಡುವುದನ್ನು ನಿಲ್ಲಿಸಬೇಕು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.