ADVERTISEMENT

ಕೊಳೆಗೇರಿ ಜನರಿಗೆ ಬೇವು-ಬೆಲ್ಲ, ಪ್ರಸಾದ ವಿತರಣೆ: ಸಚಿವೆ ಜೊಲ್ಲೆ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2022, 19:29 IST
Last Updated 31 ಮಾರ್ಚ್ 2022, 19:29 IST
ಸಚಿವೆ ಶಶಿಕಲಾ ಜೊಲ್ಲೆ
ಸಚಿವೆ ಶಶಿಕಲಾ ಜೊಲ್ಲೆ   

ನಿಪ್ಪಾಣಿ: ಯುಗಾದಿ ದಿನವನ್ನು ಧಾರ್ಮಿಕ ಮತ್ತು ದತ್ತಿ ಇಲಾಖೆಯು ‘ಧಾರ್ಮಿಕ ದಿನ’ ವನ್ನಾಗಿ ಆಚರಿಸಲು ನಿರ್ಧರಿಸಿರುವ ನಿಟ್ಟಿನಲ್ಲಿ, ರಾಜ್ಯದ ಮುಜರಾಯಿ ದೇವಸ್ಥಾನ ಗಳಲ್ಲಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ವಿಶೇಷವಾಗಿ ಆಚರಿಸಬೇಕು ಎಂದುಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಮುಖ ದೇವಸ್ಥಾನಗಳ ಸಮೀಪದಲ್ಲಿರುವ ಕೊಳಗೇರಿ ಪ್ರದೇಶಗಳ ಜನರಿಗೆ ದೇವಸ್ಥಾನದ ವತಿ ಯಿಂದ ಬೇವು-ಬೆಲ್ಲ ಮತ್ತು ಪ್ರಸಾದವನ್ನು ವಿತರಿಸುವ ವ್ಯವಸ್ಥೆ ಮಾಡಿಕೊಳ್ಳಬೇಕು. ಆರ್ಥಿಕವಾಗಿ ಹಿಂದುಳಿದ ಜನರ ಮುಖದಲ್ಲೂ ಮಂದಹಾಸ ಮೂಡಿಸುವುದು ನಮ್ಮ ಉದ್ದೇಶ. ಈ ಸಂಬಂಧ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT