ADVERTISEMENT

ಬೆಳಗಾವಿ ಲೋಕಸಭಾ ಕ್ಷೇತ್ರ ಉಪ ಚುನಾವಣೆ: ಮತಗಟ್ಟೆಗೆ ತಯಾರಿ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2021, 15:19 IST
Last Updated 7 ಫೆಬ್ರುವರಿ 2021, 15:19 IST

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಮತಗಟ್ಟೆಗಳನ್ನು ತಯಾರಿಸುವ ಕಾರ್ಯವನ್ನು ಜಿಲ್ಲಾಡಳಿತ ಆರಂಭಿಸಿದೆ. ಚುನಾವಣಾ ಆಯೋಗದ ಸೂಚನೆಯಂತೆ ಅಧಿಕಾರಿಗಳು, ವಿವಿಧ ಸರ್ಕಾರಿ ಶಾಲೆಗಳಿಗೆ ಭಾನುವಾರ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳು ಮತ್ತು ಮತಗಟ್ಟೆಯಾಗಿ ಪರಿವರ್ತಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು.

ಇದರೊಂದಿಗೆ, ಚುನಾವಣಾ ದಿನಾಂಕ ಘೋಷಣೆಗೆ ಕ್ಷಣಗಣನೆ ಆರಂಭವಾಗಿದೆ ಎನ್ನಲಾಗುತ್ತಿದೆ.

ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರು ಸೆ. 23ರಂದು ಕೋವಿಡ್‌ನಿಂದಾಗಿ ದೆಹಲಿಯ ಏಮ್ಸ್‌ನಲ್ಲಿ ನಿಧನರಾಗಿದ್ದರು. ನಿಯಮದ ಪ್ರಕಾರ ಆರು ತಿಂಗಳೊಳಗೆ ಚುನಾವಣೆ ನಡೆಸಬೇಕು. ಈ ನಿಟ್ಟಿನಲ್ಲಿ ನೋಡಿದರೆ, ಶೀಘ್ರದಲ್ಲೇ ಚುನಾವಣೆ ದಿನಾಂಕ ಘೋಷಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.