ADVERTISEMENT

ಬೆಳಗಾವಿ: 5.11 ಲಕ್ಷ ಮಕ್ಕಳಿಗೆ ಪಲ್ಸ್‌ ಪೋಲಿಯೊ

​ಪ್ರಜಾವಾಣಿ ವಾರ್ತೆ
Published 29 ಜನವರಿ 2021, 14:24 IST
Last Updated 29 ಜನವರಿ 2021, 14:24 IST

ಬೆಳಗಾವಿ: ಪಲ್ಸ್‌ ಪೋಲಿಯೊ ಲಸಿಕಾ ಕಾರ್ಯಕ್ರಮ ಜಿಲ್ಲೆಯಾದ್ಯಂತ ಜ. 31ರಂದು ನಡೆಯಲಿದೆ.

‘23 ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಪೋಲಿಯೊ ಪ್ರಕರಣಗಳು ವರದಿಯಾಗಿಲ್ಲ. ನೆರೆಯ ಪಾಕಿಸ್ತಾನ ಮತ್ತು ಅಪಘಾನಿಸ್ತಾನದಲ್ಲಿ ಇನ್ನೂ ಪ್ರಕರಣಗಳು ಕಂಡುಬರುತ್ತಿದ್ದು ಅಲ್ಲಿಂದ ಭಾರತಕ್ಕೂ ರೋಗ ಪಸರಿಸುವ ಅಪಾಯವಿದೆ. ಹೀಗಾಗಿ, ಲಸಿಕಾ ಕಾರ್ಯಕ್ರಮವನ್ನು ಸರ್ಕಾರದಿಂದ ದೇಶದಾದ್ಯಂತ ಹಮ್ಮಿಕೊಳ್ಳಲಾಗಿದೆ. ಭಾನುವಾರ ಅನಿವಾರ್ಯ ಕಾರಣಗಳಿಂದ ಲಸಿಕೆ ವಂಚಿತ ಮಕ್ಕಳಿಗೆ ಫೆ. 1ರಿಂದ 3ರವರೆಗೆ ಮನೆ ಮನೆಗೆ ತೆರಳಿ ಪೋಲಿಯೊ ಹನಿ ನೀಡಲಾಗುವುದು. ಇದಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆರೋಗ್ಯ ಕಾರ್ಯಕರ್ತೆಯರಿಗೆ ತರಬೇತಿ ಕೊಡಲಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

‘ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಎನ್.ಸಿ.ಸಿ, ಎನ್.ಎಸ್.ಎಸ್, ನರ್ಸಿಂಗ್ ವಿದ್ಯಾರ್ಥಿಗಳು, ರೋಟರಿ, ಲೈಯನ್ಸ್‌ ಕ್ಲಬ್‌ಗಳ ಸಹಯೋಗದಲ್ಲಿ 0–5 ವರ್ಷದೊಳಗಿನ 5,11,600 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. 9,77,447 ಮನೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಲಸಿಕೆ ಹಾಕಲಾಗುವುದು. ಇದಕ್ಕಾಗಿ 2,377 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 26 ಮೊಬೈಲ್ ತಂಡ ನಿಯೋಜಿಸಲಾಗಿದೆ. ಬಸ್, ರೈಲು ನಿಲ್ದಾಣ ಮೊದಲಾದ ಕಡೆಗಳಲ್ಲಿ ಸಾಗಣೆ ಬೂತ್‌ಗಳನ್ನು ಮಾಡಲಾಗಿದೆ. 9,767 ಕಾರ್ಯಕರ್ತೆಯರು ಹಾಗೂ 553 ಮೇಲ್ವಿಚಾರಕರು ಈ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

‘ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲರಿಗೂ ಲಸಿಕೆ ಹಾಕಿಸಬೇಕು. ಕೋವಿಡ್ –19 ಹಿನ್ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಲಸಿಕಾ ಕೇಂದ್ರಕ್ಕೆ ಕರೆದುಕೊಂಡು ಬರುವಾಗ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಅಂತರ ಕಾಪಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಉಚಿತ ಸಹಾಯವಾಣಿ 104 ಸಂಪರ್ಕಿಸಬಹುದು’ ಎಂದು ತಿಳಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.