ಹುಕ್ಕೇರಿ: ‘ಪತ್ರಕರ್ತರು ಜವಾಬ್ದಾರಿಯಿಂದ ವರ್ತಿಸಬೇಕು. ಪತ್ರಿಕಾ ರಂಗ ತೀವ್ರ ಬದಲಾವಣೆಗೆ ಒಳಗಾಗುತ್ತಿದ್ದು, ಗ್ರಾಮೀಣ ಪತ್ರಕರ್ತರು ಎಐ ಬಳಸಿಕೊಂಡು ಸುದ್ದಿಗೆ ಆಧುನಿಕ ಸ್ಪರ್ಶ ಕೊಡಲು ತಯಾರಾಗಬೇಕು’ ಎಂದು ಶಾಸಕ ನಿಖಿಲ್ ಕತ್ತಿ ಹೇಳಿದರು.
ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕ ಮತ್ತು ವಿವಿಧ ಇಲಾಖೆಗಳ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದಿಲೀಪ ಕುರಂದವಾಡೆ ಮಾತನಾಡಿ, ‘ಪತ್ರಕರ್ತರ ಜವಾಬ್ದಾರಿ ಹೆಚ್ಚಿದ್ದು, ಅವರ ಆರ್ಥಿಕ ಸ್ಥಿತಿ ಸರಿಯಾಗಿಲ್ಲ. ಅವರಿಗೆ ಸರ್ಕಾರ ಸೌಲಭ್ಯ ಒದಗಿಸಬೇಕು’ ಎಂದು ಆಗ್ರಹಿಸಿದರು.
ಯಮಕನಮರಡಿ ಪಿಐ ಜಾವೀದ ಮುಶಾಪುರ ಮಾತನಾಡಿದರು. ಘಟಕದ ಅಧ್ಯಕ್ಷ ರವಿ ಕಾಂಬಳೆ ಅಧ್ಯಕ್ಷತೆ ವಹಿಸಿದ್ದರು. ಹಿರೇಮಠದ ಚಂದ್ರಶೇಖರ್ ಸ್ವಾಮೀಜಿ ಮತ್ತು ಕ್ಯಾರಗುಡ್ಡ ಔಜೀಕರ ಆಶ್ರಮದ ಅಭಿನವ ಮಂಜುನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆಗೈದ ಸಾಧಕರನ್ನು ಸತ್ಕರಿಸಲಾಯಿತು.
ತಹಶೀಲ್ದಾರ್ ಬಲರಾಮ ಕಟ್ಟಿಮನಿ, ತಾಲ್ಲೂಕು ಪಂಚಾಯಿತಿ ಇಒ ಟಿ.ಆರ್.ಮಲ್ಲಾಡದ, ಮಹಾವೀರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹಾವೀರ ನಿಲಜಗಿ, ಉಪಾಧ್ಯಕ್ಷ ಪ್ರಜ್ವಲ್ ನಿಲಜಗಿ, ಸಂಘದ ಪದಾಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.