ಅಥಣಿ: ಖಾಸಗಿ ಶಾಲೆಯ ವ್ಯವಸ್ಥೆ ದೇಶದಲ್ಲಿ ಇಲ್ಲದ್ದರೆ ಸಮಾಜದಲ್ಲಿ ಶೇ50ರಷ್ಟು ಜನ ಶಿಕ್ಷಣದಿಂದ ವಂಚಿತರಾಗುತ್ತಿದ್ದರು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಪಟ್ಟಣದ ರಾಯಲ್ ಪಂಕ್ಷನ್ ಹಾಲನಲ್ಲಿ ಅಥಣಿ ತಾಲ್ಲೂಕು ಅನುದಾನ ರಹಿತ ಶಾಲೆಗಳ ಒಕ್ಕೂಟದ ಶಿಕ್ಷಕರಿಗೆ ಆಯೋಜಿಸಿದ್ದ ವಿಚಾರ ಸಂಕಿರಣ ಹಾಗೂ ಗುರುಸೇವಾ ರತ್ನ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರ ಅರ್ಧ ಕೆಲಸವನ್ನು ಖಾಸಗಿ ಶಾಲೆಗಳು ಮಾಡುತ್ತವೆ. ಆದ್ದರಿಂದ ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಹೆಚ್ಚು ಕಾಳಜಿ ವಹಿಸಬೇಕಾಗಿದೆ ಎಂದು ಹೇಳಿದರು .
ಸುರೇಶ ಚಿಕ್ಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಅನುದಾನ ರಹಿತ ಶಾಲೆಯ ಶಿಕ್ಷಕರಿಗೆ ಸರ್ಕಾರಿ ವೇದಿಕೆಯಲ್ಲಿ ಪ್ರಶಸ್ತಿಗಳು ಸಿಗುವುದಿಲ್ಲ ಹಾಗೂ ಸರ್ಕಾರಿ ವೇದಿಕೆಯಲ್ಲಿ ನಿವೃತ್ತಿ ಹೊಂದಿದವರಿಗೆ ಮಾತ್ರ ಅವಕಾಶ ಸಿಗುತ್ತವೆ. ಆದ್ದರಿಂದ ನಾವು ಪ್ರತ್ಯೇಕವಾಗಿ ಖಾಸಗಿ ಶಾಲೆಗಳಿಂದ ಶಿಕ್ಷಕರನ್ನು ಗೌರವಿಸುವ ಕೆಲಸ ಮಾಡುತ್ತೇವೆ. ಖಾಸಗಿ ಶಾಲೆಯಗಳಿಗೆ ಶಾಸಕ ಲಕ್ಷ್ಮಣ ಸವದಿ ಅವರು ಸಾಕಷ್ಟು ಸಹಕಾರ ನಿಡುತ್ತಾ ಬಂದಿದ್ದರೆ, ಖಾಸಗಿ ಶಾಲೆಗಳಿಗೆ ಪರವಾನಗಿ ಪಡೆಯಲು ಸಾಕಷ್ಟು ಷರತ್ತುಗಳನ್ನ ವಿಧಿಸುತ್ತಿದ್ದಾರೆ. ಅವಗಳನ್ನು ಸರಳಗೊಳಿಸಲು ಸರ್ಕಾರಕ್ಕೆ ಒತ್ತಡ ಹಾಕಬೇಕು ಎಂದು ಮನವಿ ಮಾಡಿದರು .
ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ, ಶೆಟ್ಟರಮಠದ ಮರುಳಸಿದ್ದ ಸ್ವಾಮೀಜಿ, ಅನುದಾನ ರಹಿತ ಖಾಸಗಿ ಶಾಲಾ ಒಕ್ಕೂಟದ ಉಪಾಧ್ಯಕ್ಷ ಡಿ.ಡಿ.ಮೆಕನಮರಡಿ ಮಾತನಾಡಿದರು .
ಕ್ಷೇತ್ರ ಸಮನ್ವಯ ಅಧಿಕಾರಿ ಜಿ.ಎ.ಖೋತ, ಡಿ.ಡಿ.ಮೆಕನಮರಡಿ, ರಾಯಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಪೀಕ ಡಾಂಗೆ, ಬಣಜವಾಡ ಸಂಸ್ಥೆಯ ಅಧ್ಯಕ್ಷ ಎಲ್.ಎನ್. ಬಣಜವಾಡ, ಕೆ.ಬಿ.ಜಾಲವಾದಿ, ಅನಂತ ಜೋಶಿ, ವಿಜಯ ಹುದ್ದಾರ, ಚಿದಾನಂದ ಪಾಟೀಲ, ಸದಾಶಿವ ಚಿಕ್ಕಟ್ಟಿ, ಅರುಣ ಮಾಳಿ, ರಾಮಣ್ಣದರಿಗೌಡ, ಐ.ಎಂ. ಇಂಚಗೀರಿ, ಎಂ.ಎನ್. ಬಡಿಗೇರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.