ರಾಮನಗೌಡ ಹಾಗೂ ಶೈಲಾ ದಂಪತಿ
ಚಿಕ್ಕೋಡಿ: ತಾಲ್ಲೂಕಿನ ಉಮರಾಣಿ ಗ್ರಾಮದ ವೃದ್ಧ ದಂಪತಿಗೆ ಸ್ವಯಾರ್ಜಿತ ಆಸ್ತಿ ಮರಳಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಉಮರಾಣಿಯಲ್ಲಿ ರಾಮನಗೌಡ ಪಾಟೀಲ ಹಾಗೂ ಶೈಲಾ ದಂಪತಿ 2 ಎಕರೆ 10 ಗುಂಟೆ ಜಮೀನು ಮತ್ತು ತೋಟದ ಮನೆ ಹೊಂದಿದ್ದಾರೆ. ಅವರ ಇಬ್ಬರು ಪುತ್ರರು ಆಸ್ತಿ ದಾಖಲೆಗಳನ್ನು ಸುಪರ್ದಿಗೆ ತೆಗೆದುಕೊಂಡು, ತಂದೆ– ತಾಯಿಯನ್ನು ಮನೆಯಿಂದ ಹೊರ ಹಾಕಿದ್ದರು. ನೊಂದ ದಂಪತಿ ಚಿಕ್ಕೋಡಿ ಉಪ ವಿಭಾಗಾಧಿಕಾರಿಯವರ ನ್ಯಾಯಾಲಯದ ಮೊರೆ ಹೋಗಿದ್ದರು.
ಈ ಬಗ್ಗೆ ಜೂನ್ 20ರಂದು ‘ಪ್ರಜಾವಾಣಿ’ ಮುಖಪುಟದಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. ಇದಕ್ಕೆ ಸ್ಪಂದಿಸಿದ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಸುಭಾಷ ಸಂಪಗಾಂವಿ ‘ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ–2007’ರಡಿ ಅಸ್ತಿ ಮರಳಿಸುವಂತೆ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ‘ಪ್ರಜಾವಾಣಿ’ ವರದಿಯನ್ನೂ ನಮೂದಿಸಿದ್ದಾರೆ.
‘ಕಳೆದ 17 ವರ್ಷಗಳಿಂದ ಸತತ ಹೋರಾಟ ಮಾಡುತ್ತಿದ್ದರೂ ನ್ಯಾಯ ಸಿಕ್ಕಿರಲಿಲ್ಲ. ‘ಪ್ರಜಾವಾಣಿ’ ವರದಿಯಿಂದ ಒಂದೇ ತಿಂಗಳಲ್ಲಿ ದೊರೆಯಿತು. ಪತ್ರಿಕೆಗೆ ಧನ್ಯವಾದ ಸಲ್ಲಿಸುತ್ತೇವೆ’ ಎಂದು ರಾಮನಗೌಡ ಹಾಗೂ ಶೈಲಾ ದಂಪತಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.