ADVERTISEMENT

‘ಮಕ್ಕಳ ಹಕ್ಕುಗಳ ರಕ್ಷಣೆ ಮಾಡಿ’

ಸಾಮಾಜಿಕ ಪರಿವರ್ತನಾ ಜನಾಂದೋಲನ ಸದಸ್ಯರ ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2019, 15:32 IST
Last Updated 24 ಆಗಸ್ಟ್ 2019, 15:32 IST

ಬೆಳಗಾವಿ: ‘ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು’ ಎಂದುಸಾಮಾಜಿಕ ಪರಿವರ್ತನಾ ಜನಾಂದೋಲನ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವೈ.ಮರಿಸ್ವಾಮಿಒತ್ತಾಯಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಮಳೆ ಹಾಗೂ ಪ್ರವಾಹದಿಂದ 80 ಸಾವಿರ ಮಕ್ಕಳು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಗರ್ಭಿಣಿ ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರದ ಕೊರತೆ ಕಾಡುತ್ತಿದೆ. ಹೀಗಾಗಿ, ಕೂಡಲೇ ಪೌಷ್ಟಿಕ ಆಹಾರಹಾಗೂ ಶುದ್ಧ ಕುಡಿಯುವ ನೀರು ಒದಗಿಸಬೇಕು’ಎಂದು ಆಗ್ರಹಿಸಿದರು.

‘ಹಾನಿಗೊಳಗಾಗಿರುವ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳನ್ನು ತ್ವರಿತಗತಿಯಲ್ಲಿ ನಿರ್ಮಿಸಬೇಕು. ಪಠ್ಯಪುಸ್ತಕ, ಸಮವಸ್ತ್ರ, ಶೂ, ಸಾಕ್ಸ್‌ ಹಾಗೂ ಇನ್ನಿತರ ಕಲಿಕಾ ಸಾಮಗ್ರಿಗಳನ್ನು ಮಕ್ಕಳಿಗೆ ಪೂರೈಸಬೇಕು. ಬಸ್‌ ಪಾಸ್‌ ಕಳೆದುಕೊಂಡಿರುವ ವಿದ್ಯಾರ್ಥಿಗಳಿಗೆ ಕೂಡಲೇ ಉಚಿತವಾಗಿ ಬಸ್‌ಪಾಸ್‌ ವಿತರಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಪ್ರತಿ ಗ್ರಾಮದಲ್ಲಿ 24 ಗಂಟೆಯೂ ಆರೋಗ್ಯ ಸೇವೆ ಸಿಗುವಂತೆ ನೋಡಿಕೊಳ್ಳಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ದುರಸ್ತಿ ಮಾಡಿಸಬೇಕು. ಮಕ್ಕಳಿಗೆ ಆಪ್ತ ಸಮಾಲೋಚನಾ ವ್ಯವಸ್ಥೆ ಕಲ್ಪಿಸಬೇಕು’ ಎಂದು ಮನವಿ ಮಾಡಿದರು.

ರಾಜ್ಯ ಘಟಕದ ಉಪಾಧ್ಯಕ್ಷೆಶೋಭಾ ಗಸ್ತಿ,ಕಾರ್ಯದರ್ಶಿ ವಿಠ್ಠಲ ಚಿಕಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.