ADVERTISEMENT

ಕೇಂದ್ರದ ವಿರುದ್ಧ ಪ್ರತಿಭಟನೆ ಶೀಘ್ರ: ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2025, 14:09 IST
Last Updated 22 ಏಪ್ರಿಲ್ 2025, 14:09 IST
<div class="paragraphs"><p>ಸತೀಶ ಜಾರಕಿಹೊಳಿ</p></div>

ಸತೀಶ ಜಾರಕಿಹೊಳಿ

   

ಬೆಳಗಾವಿ: ‘ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಇ.ಡಿಯಂಥ ತನಿಖಾ ಸಂಸ್ಥೆಗಳ ದುರ್ಬಳಕೆ ಖಂಡಿಸಿ, ಏಪ್ರಿಲ್ 27 ಅಥವಾ 28ರಂದು ಕೇಂದ್ರ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿದೆ ಎಂಬ ಭಾವನೆ ಮೂಡಿಸಲು ಬಿಜೆಪಿಯವರು ಜನಾಕ್ರೋಶ ಯಾತ್ರೆ ನಡೆಸಿದ್ದಾರೆ. ಆದರೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆಗಳಲ್ಲಿ ಭಾರಿ ಏರಿಕೆ ಮಾಡಿದೆ. ಅವರಿಗೆ ತಿರುಗೇಟು ನೀಡಿ, ಜನರಿಗೆ ಸತ್ಯ ತಿಳಿಸುವುದು ನಮ್ಮ ಉದ್ದೇಶ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

‘ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಗುರಿ ಆಗಿಸಿದ್ದಕ್ಕಾಗಿ, ಎಐಸಿಸಿ ಮತ್ತು ಕೆಪಿಸಿಸಿ ನಿರ್ದೇಶನದಂತೆ ಕೇಂದ್ರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ’ ಎಂದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಕೆ.ಸಿ.ವೇಣುಗೋಪಾಲ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಮತ್ತಿತರ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವರು’ ಎಂದರು.

ಬಿಜೆಪಿಯಲ್ಲಿ ಒಳಬೇಗುದಿ ಆಂತರಿಕ ತಿಕ್ಕಾಟ ಹೆಚ್ಚಿದೆ. ಜನರು ಇವೆಲ್ಲವನ್ನೂ ತಮಾಷೆಯಾಗಿ ನೋಡುತ್ತಿದ್ದಾರೆ. ಇದನ್ನು ಮರೆಮಾಚಲು ಬಿಜೆಪಿಯವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಿದ್ದಾರೆ.
ಲಕ್ಷ್ಮೀ ಹೆಬ್ಬಾಳಕರ, ಸಚಿವೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.