ಪ್ರತಿಭಟನೆ(ಸಾಂದರ್ಭಿಕ ಚಿತ್ರ)
ರಾಮದುರ್ಗ: ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರ ವೇತನ ಪರಿಷ್ಕರಣೆ ಮಾಡುವಂತೆ ಒತ್ತಾಯಿಸಿ ಜುಲೈ 23ರಿಂದ ಬೆಂಗಳೂರಿನ ಫ್ರೀಡ್‌ಂ ಪಾರ್ಕ್‌ನಲ್ಲಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮ ಪಂಚಾಯ್ತಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗೈಬು ಜೈನೆಖಾನ ಹೇಳಿದರು.
ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿಗಳಲ್ಲಿ ಕೆಲಸ ಮಾಡುತ್ತಿರುವ ಸುಮಾರು 63 ಸಾವಿರ ನೌಕರರು ಪ್ರತಿ ಐದು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡದೇ ಸತಾಯಿಸುತ್ತಿರುವ ರಾಜ್ಯ ಸರ್ಕಾರದ ನೀತಿ ಖಂಡಿಸಿ ಈ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ವೇತನ ಪರಿಷ್ಕರಣೆಗಾಗಿ ರಾಜ್ಯಮಟ್ಟದ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳ ಜೊತೆಗೆ ಮಾತುಕತೆ ಜರುಗಿದೆ. ನೌಕರರ ಪಿಂಚಣಿ ಜಾರಿಗಾಗಿ ಒಪ್ಪಂದಗಳು ಜರುಗಿವೆ. ಸೇವಾ ಹಿರಿತನದ ಮೇಲೆ ವೇತನ ನೀಡಲಾಗುತ್ತಿಲ್ಲ. ಸುಮಾರು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಅನಿರ್ದಿಷ್ಟ ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಹೋರಾಟದಲ್ಲಿ ಪಂಚಾಯ್ತಿ ನೌಕರರ ಭವಿಷ್ಯ ಅಡಗಿದೆ. ಪಂಚಾಯ್ತಿ ನೌಕರರು ತಮ್ಮ ಕೆಲಸಗಳನ್ನು ಸ್ಥಗಿತಗೊಳಿಸಿ ಮಾಡು ಇಲ್ಲವೇ ಮಡಿ ಎಂಬ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೌಕರರ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ತಾಲ್ಲೂಕು ಅಧ್ಯಕ್ಷ ದಿಲೀಪ ಭೋವಿ, ರಮೇಶ ತಿಗಡಿ, ಕೇಶವ ದಾಸರ, ನಾಗಪ್ಪ ಸಂಗೊಳ್ಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.