ADVERTISEMENT

ಪ್ರವರ್ಗ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2021, 15:23 IST
Last Updated 2 ಮಾರ್ಚ್ 2021, 15:23 IST
ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿಗೆ ಆಗ್ರಹಿಸಿ ಸಮಾಜದವರು ಪ್ರತಿಭಟನೆ ನಡೆಸಿದರು
ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿಗೆ ಆಗ್ರಹಿಸಿ ಸಮಾಜದವರು ಪ್ರತಿಭಟನೆ ನಡೆಸಿದರು   

ಬೆಳಗಾವಿ: ‘ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡಿ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿ ಸಮಾಜದವರು ಇಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ಚನ್ನಮ್ಮ ವೃತ್ತದಿಂದ ಮೆರವಣಿಗೆ ನಡೆಸಿದರು.

‘ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಸಮಾಜಕ್ಕೆ ಸರ್ಕಾರ ನೆರವಾಗಬೇಕು. ಕಾನೂನು ಬದ್ಧವಾಗಿ ಸಿಗಬೇಕಾದ ಮಾನ್ಯತೆ ದೊರಕಿಸಿಕೊಡಬೇಕು’ ಎಂದು ಒತ್ತಾಯಿಸಿದರು.

‘ಸಮುದಾಯದಲ್ಲಿ ಅನೇಕರು ಬಡತನದಲ್ಲಿದ್ದಾರೆ. ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಹೀಗಾಗಿ, ಹಿಂದುಳಿದ ವರ್ಗದಲ್ಲಿ ಎಲ್ಲ ಲಿಂಗಾಯತ ಸಮಾಜದ ಒಳಪಂಗಡಗಳನ್ನು ಸೇರಿಸಬೇಕು. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ, ನಿರಂತರ ಹೋರಾಟ ನಡೆಯುತ್ತಿದ್ದರೂ ಸರ್ಕಾರ ಈ ಬಗ್ಗೆ ಎಚ್ಚೆತ್ತುಕೊಳ್ಳುತ್ತಿಲ್ಲದಿರುವುದು ಸರಿಯಲ್ಲ’ ಎಂದರು.

ADVERTISEMENT

ಮುಖಂಡರಾದ ಎ.ಬಿ. ಪಾಟೀಲ, ರೋಹಿಣಿ ಪಾಟೀಲ, ಡಾ.ರವಿ ಪಾಟೀಲ, ವಿನಯ ನಾವಲಗಟ್ಟಿ, ರಾಜು ಮಗದುಮ್ಮ, ರುದ್ರಣ್ಣ ಚಂದರಗಿ, ಆರ್.ಪಿ. ಪಾಟೀಲ, ಬಸವರಾಜ ರೊಟ್ಟಿ, ಡಿ.ಎಂ. ಪಾಟೀಲ, ಆರ್.ಜಿ. ಪಾಟೀಲ, ಎ.ಆರ್. ಪಾಟೀಲ, ಶಿವನಗೌಡ ಪಾಟೀಲ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.