ADVERTISEMENT

‌ಬೆಳಗಾವಿಯಲ್ಲಿ ಮೌನ ಪ್ರತಿಭಟನೆ 10ಕ್ಕೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2025, 2:46 IST
Last Updated 5 ಡಿಸೆಂಬರ್ 2025, 2:46 IST
ಕಾಗವಾಡ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪಂಚಮಸಾಲಿ ಸಮಾಜದವರ ಸಭೆಯಲ್ಲಿ ಸ್ವಾಮೀಜಿ, ಗಣ್ಯರು ಪಾಲ್ಗೊಂಡಿದ್ದರು
ಕಾಗವಾಡ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪಂಚಮಸಾಲಿ ಸಮಾಜದವರ ಸಭೆಯಲ್ಲಿ ಸ್ವಾಮೀಜಿ, ಗಣ್ಯರು ಪಾಲ್ಗೊಂಡಿದ್ದರು   

ಕಾಗವಾಡ: ಕಳೆದ ವರ್ಷ ಅಧಿವೇಶನದಲ್ಲಿ 2ಎ ಮೀಸಲಾತಿಗಾಗಿ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಪಂಚಮಸಾಲಿ ಸಮಾಜದವರ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಖಂಡಿಸಿ ಡಿ.10ರಂದು ಬೆಳಗಾವಿಯಲ್ಲಿ ಮೌನ ಪ್ರತಿಭಟನೆ ನಡೆಸಲಾಗುವುದು ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟನೆ ಖಂಡಿಸಿ ಮೌನ ಪ್ರತಿಭಟನೆ ನಡೆಯಲಿದೆ. ಪಂಚಮಸಾಲಿಗಳ ಮೇಲಿನ ಹಲ್ಲೆ ಮರೆಯಲಾಗದು. ಡಿ.10ರಂದು ಲಿಂಗಾಯತರ ಮೇಲಿನ ದೌರ್ಜನ್ಯ ದಿನವನ್ನಾಗಿ ಆಚರಿಸಲಾಗುವುದು ಎಂದರು.

ಗಾಂಧಿ ಭವನದಿಂದ ಮೌನ ರ‍್ಯಾಲಿ ಮಾಡಲಾಗುವುದು. ಕೈಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ಮಾಡಲಾಗುವುದು. ಇದುವರೆಗೆ ಯಾವುದೇ ಸರ್ಕಾರ ಲಿಂಗಾಯತರ ಮೇಲೆ ದೌರ್ಜನ್ಯ ಮಾಡಿಲ್ಲ. ಆದರೆ ಈ ಸರ್ಕಾರ ಲಿಂಗಾಯತರ ಮೇಲೆ ದೌರ್ಜನ್ಯ ಮಾಡಿದೆ. ಪ್ರತಿಭಟನೆಯಲ್ಲಿ ಸಮಾಜದವರು ಭಾಗವಹಿಸಬೇಕು ಹಾಗೂ 2ಎ ಮೀಸಲಾತಿಗಾಗಿ ನಮ್ಮ ಹೋರಾಟ ನಿರಂತರವಾಗಲಿದೆ ಎಂದರು.

ADVERTISEMENT

ಬಸವನಗೌಡ ಪಾಟೀಲ, ಉಮೇಶ ಪಾಟೀಲ, ಕಾಕಾ ಪಾಟೀಲ, ರಾಹುಲ ಕಟಗೇರಿ, ಅಶೋಕ ಪಾಟೀಲ, ಪ್ರಕಾಶ ಪಾಟೀಲ, ಅಣ್ಣಾಗೌಡ ಪಾಟೀಲ, ವಿನಾಯಕ ಚೌಗಲೆ, ಪವನ ಪಾಟೀಲ ರವಿ ಪಾಟೀಲ, ಎಂ.ಬಿ. ಉದಗಾವೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.