ADVERTISEMENT

ಬೆಳಗಾವಿ: ಸಕ್ಕರೆ ಕಾರ್ಖಾನೆ ಎದುರು ರೈತರ ಧರಣಿ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2020, 8:35 IST
Last Updated 7 ಸೆಪ್ಟೆಂಬರ್ 2020, 8:35 IST
   

ಎಂ.ಕೆ. ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): ಕಬ್ಬಿನ ಬಾಕಿ ಬಿಲ್ ಹಾಗೂ ಕಾರ್ಮಿಕರ ವೇತನ ಪಾವತಿಗೆ ಆಗ್ರಹಿಸಿ ಇಲ್ಲಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಎದುರು ರೈತರು ಸೋಮವಾರ ಧರಣಿ ಆರಂಭಿಸಿದ್ದಾರೆ.

‘2017-18ನೇ ಸಾಲಿನ ಕಬ್ಬಿನ ಬಾಕಿ ಬಿಲ್ ₹ 7.8 ಕೋಟಿ, 2018-19 ಮತ್ತು 2019-20ನೇ ಸಾಲಿನ ಕಬ್ಬು ಕಟಾವು ಮತ್ತು ಸಾಗಾಣಿಕೆಯ ಬಾಕಿ ₹ 1.2 ಕೋಟಿ ಹಾಗೂ 2019-20ನೇ ಸಾಲಿನಲ್ಲಿ ಜನವರಿ ನಂತರ ಕಬ್ಬು ಪೂರೈಸಿದ ರೈತರ ₹ 13.5 ಕೋಟಿಯನ್ನು ಪಾವತಿಸಬೇಕಿದೆ. ಕಾರ್ಮಿಕರ 6 ತಿಂಗಳ ವೇತನ ಬಾಕಿ ಉಳಿಸಿಕೊಂಡಿದೆ’ ಎಂದು ರೈತ ಸಂಘದ ರಾಜ್ಯ ಸಂಚಾಲಕಿ ಜಯಶ್ರೀ ಗುರನ್ನವರ ತಿಳಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರ ನಾಯ್ಕ, ‘ರೈತರ ಬಾಕಿ ಹಣ ಪಾವತಿಸಬೇಕೆಂದು ಹಲವು ಬಾರಿ ಕಾರ್ಖಾನೆಗೆ ಹಾಗೂ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದೇವೆ. ಪ್ರಯೋಜನ ಆಗದಿರುವುದರಿಂದಾಗಿ ಹೋರಾಟಕ್ಕೆ ಸಿದ್ಧವಾಗಿದ್ದೇವೆ. ಬಾಕಿ ಕೊಡುವವರೆಗೂ ಧರಣಿ ನಡೆಸಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.