ADVERTISEMENT

ಸವದತ್ತಿ ಯಲ್ಲಮ್ಮ ಸೇರಿ 3 ದೇವಸ್ಥಾನ ಇನ್ನೊಂದು ತಿಂಗಳು ಬಂದ್

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2020, 13:43 IST
Last Updated 2 ಆಗಸ್ಟ್ 2020, 13:43 IST

ಬೆಳಗಾವಿ: ಜಿಲ್ಲೆಯ ಸವದತ್ತಿಯ ರೇಣುಕಾ ಯಲ್ಲಮ್ಮದೇವಿ ಹಾಗೂ ಜೋಗುಳಬಾವಿ ಸತ್ತೆಮ್ಮದೇವಿ ಮತ್ತು ರಾಯಬಾಗದ ಚಿಂಚಲಿ ಮಾಯಕ್ಕದೇವಿ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನವನ್ನು ಆ. 31ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.

‘ಕೊರೊನಾ ಸೋಂಕು ಹರಡದಂತೆ ನಿಯಂತ್ರಿಸಲು ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಈ ದೇವಸ್ಥಾನಗಳ ಆಡಳಿತ ಮಂಡಳಿಯವರು ನಿತ್ಯದ ಧಾರ್ಮಿಕ ವಿಧಿ ವಿಧಾನಗಳನ್ನು ಮುಂಜಾಗ್ರತಾ ಕ್ರಮ ವಹಿಸಿ ನಡೆಸಲು ಷರತ್ತಿಗೆ ಒಳಪಟ್ಟು ವಿನಾಯಿತಿ ನೀಡಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನವನ್ನು ಮಾರ್ಚ್‌ 18ರಿಂದ ನಿಷೇಧಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.